ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷ್ಯ ಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು.
ಖಗೋಳ ಶಾಸ್ತ್ರದ ಪ್ರಕಾರ–
ಸೂರ್ಯೋದಯ ಪೂರ್ವದಲ್ಲಿ ಮತ್ತು ಸೂರ್ಯಾಸ್ತಮಾನ ಪಶ್ಚಿಮದಲ್ಲಿ ಎಂದು ಹೇಳುವುದಾದರೂ, ಯಾವುದೇ ಸ್ಥಳದಲ್ಲಿ ಕರಾರುವಾಕ್ಕಾಗಿ ಪೂರ್ವದಲ್ಲೇ ಸೂರ್ಯೋದಯವಾಗುವುದು ಮತ್ತು ಪಶ್ಚಿಮದಲ್ಲೇ ಸೂರ್ಯಾಸ್ತಮಾನವಾಗುವುದು ವರ್ಷದಲ್ಲಿ ಎರಡೇ ದಿನಗಳಂದು. ಆ ದಿನಗಳನ್ನು ಈಕ್ವಿನಾಕ್ಸ್ (equinox)ಎಂದು ಕರೆಯುತ್ತಾರೆ. ಅಂದು ಹಗಲಿರುಳುಗಳು ದಿನವನ್ನು ಸಮಪಾಲಾಗಿ, ಅಂದರೆ ೧೨ಗಂಟೆಗಳಾಗಿ ಹಂಚಿಕೊಳ್ಳುತ್ತವೆ. ವರ್ಷದ ಉಳಿದ ದಿನಗಳಲ್ಲಿ ಹಗಲಿರುಳುಗಳ ಪಾಲು ಸಮವಾಗಿರುವುದಿಲ್ಲ.
ಬೇಸಗೆಯಲ್ಲಿ ಹಗಲು ಹೆಚ್ಚು, ಇರುಳು ಕಮ್ಮಿ. ಚಳಿಗಾಲದಲ್ಲಿ ಹಗಲು ಕಮ್ಮಿ, ಇರುಳು ಹೆಚ್ಚು. ಈಕ್ವಿನಾಕ್ಸ್ ದಿವಸಗಳ ಹೊರತಾಗಿ ಸೂರ್ಯನ ಉದಯ ಪೂರ್ವದ ಬಲಕ್ಕೆ (ಅಂದರೆ ಉತ್ತರಕ್ಕೆ) ಅಥವಾ ಎಡಕ್ಕೆ (ಅಂದರೆ ದಕ್ಷಿಣಕ್ಕೆ) ಆಗುತ್ತದೆ. ಚಳಿಗಾಲ (ಅಂದರೆ ಇರುಳಿನ ಪ್ರಮಾಣ)ಹೆಚ್ಚಾದಂತೆ ಸೂರ್ಯನ ಉದಯ ಹೆಚ್ಚು ದಕ್ಷಿಣ ದಿಕ್ಕಿಗೆ ಚಲಿಸುವುದು ಗೋಚರಿಸುತ್ತದೆ. ಕೊನೆಗೆ ಒಂದು ದಿನ ದಕ್ಷಿಣದ ತುತ್ತ ತುದಿಯ ಹಂತವನ್ನು ತಲುಪಿ, ಅಚಲವೆಂಬಂತೆ ಕಂಡು, ಮರುದಿನದಿಂದ ಸೂರ್ಯನ ಉದಯ ಮರಳಿ ವಿರುಧ್ಧ ದಿಕ್ಕಿನಲ್ಲಿ ಆಗುತ್ತಾ ಚಲಿಸುತ್ತದೆ. *ಅಂದರೆ ಸೂರ್ಯ ಇನ್ನು ದಕ್ಷಿಣ ದಿಕ್ಕಿನತ್ತದ ತನ್ನ ಚಲನವನ್ನು ನಿಲ್ಲಿಸಿ ಉತ್ತರಕ್ಕೆ ಚಲಿಸಲು ಪ್ರಾರಂಭಿಸುತ್ತಾನೆ. ಈ ದಿನ ಉತ್ತರಾಯಣದ ದಿನ. ಇದು ಚಳಿಗಾಲ ಮುಗಿದು ಮುಂಬರುವ ಬೇಸಗೆಯ ಮುನ್ಸೂಚನೆ. winter solstice ಎಂದೂ ಕರೆಯಲ್ಪಡುತ್ತದೆ. ಸುಮಾರು ಡಿಸೆಂಬರ್ ೨೨ ಈ ದಿನ. ಈ ದಿನವನ್ನು ಮಕರ ಸಂಕ್ರಾಂತಿಯೆಂದು ಗುರುತಿಸಬೇಕಾಗಿದ್ದರೂ ಸಾಂಪ್ರದಾಯಿಕವಾಗಿ ಜನವರಿ ತಿಂಗಳ ನಡುವಿನಲ್ಲಿ ಮಕರ ಸಂಕ್ರಾಂತಿಯನ್ನು ಆಚರಿಸುತ್ತೇವೆ.
ಇಲ್ಲಿಂದ ಸೂರ್ಯೋದಯ ಇನ್ನು ಆರು ತಿಂಗಳು ಉತ್ತರದ ದಿಕ್ಕಿನಲ್ಲಿ ಚಲಿಸುತ್ತಾ ನಡುವೆ ಮತ್ತೆ ಈಕ್ವಿನಾಕ್ಸ್ದಿ ನವನ್ನೂ ತಲುಪಿ, ಇನ್ನೂ ಅದೇ ದಿಕ್ಕಿನಲ್ಲಿ (ಉತ್ತರಕ್ಕೆ)ಚಲಿಸುತ್ತಾ ಹೋಗುತ್ತದೆ. ಉತ್ತರಕ್ಕೆ ಹೆಚ್ಚು ಹೋದಂತೆಲ್ಲಾ ಹಗಲಿನ ಪ್ರಮಾಣ ಹೆಚ್ಚಾಗಿ ಇರುಳು ಕಮ್ಮಿಯಾಗುತ್ತಾ ಹೋಗುತ್ತದೆ. ಸೂರ್ಯನ ತಾಪ ಹೆಚ್ಚಾಗುತ್ತಾ ಬೇಸಗೆಯನ್ನು ಅನುಭವಿಸುತ್ತೇವೆ. ಕೊನೆಗೆ ಒಂದು ದಿನ ಉತ್ತರದ ತುತ್ತ ತುದಿಯನ್ನು ತಲುಪಿ, ಅಚಲವೆಂಬಂತೆ ಕಂಡು, ಮರುದಿನದಿಂದ ಸೂರ್ಯನ ಉದಯ ಮರಳಿ ವಿರುದ್ಧ ದಿಕ್ಕಿನಲ್ಲಿ ಆಗುತ್ತಾ ಚಲಿಸುತ್ತದೆ.
ಅಂದರೆ ಸೂರ್ಯ ಇನ್ನು ಉತ್ತರ ದಿಕ್ಕಿನತ್ತದ ತನ್ನ ಚಲನೆಯನ್ನು ನಿಲ್ಲಿಸಿ ದಕ್ಷಿಣಕ್ಕೆ ಚಲಿಸಲು ಪ್ರಾರಂಭಿಸುತ್ತಾನೆ. ಇದು ದಕ್ಷಣಯಾನದ ದಿನ. ಬೇಸಗೆ ಮುಗಿದು ಮುಂಬರುವ ಚಳಿಗಾಲದ ಮುನ್ಸೂಚನೆ. ಈ ದಿನವನ್ನು ಕರ್ಕಾಟಕ ಸಂಕ್ರಾಂತಿ ಎಂದು ಗುರುತಿಸುತ್ತಾರೆ. summer solstice ಎಂದೂ ಕರೆಯಲ್ಪಡುತ್ತದೆ. ಸುಮಾರು ಜೂನ್ ೨೧ ಈ ದಿನ. ಇಷ್ಟೆಲ್ಲಾ ವಿವರಣೆ ಅನ್ವಯಿಸುವುದು ಭೂಮಂಡಲದ ಭೂಮಧ್ಯರೇಖೆಯ ಉತ್ತರಾರ್ತ. ಇದೇ ರೀತಿಯ ಆದರೆ ತದ್ವಿರುದ್ಧವಾದ ವಿವರಣೆ ದಕ್ಷಿಣಾರ್ಧಕ್ಕೆ ಅನ್ವಯಿಸುತ್ತದೆ.
ಹೀಗೆ ಕಾಣುವ ಸೂರ್ಯನ ಚಲನೆಗೆ ಭೂಮಿಯ ಅಕ್ಷರೇಖೆ (axis) ಸುಮಾರು 22 1/2 degree ವಾಲಿರುವುದು ಕಾರಣ. ಯಾವುದಾದರೂ ಒಂದು ನಿಗದಿತ ಜಾಗದಲ್ಲಿ ದಿನಾಲು ನಿಂತು, ದಿನದ ಒಂದೇ ನಿಗದಿತ ಸಮಯದಲ್ಲಿ, ಆಗಸದಲ್ಲಿ ಸೂರ್ಯನ ಸ್ಥಾನವನ್ನು ಗುರುತು ಹಾಕಿಕೊಂಡು, ಈ ರೀತಿ ವರ್ಷವಿಡೀ ಮಾಡಿದರೆ, ಗುರುತು ಹಾಕಿಕೊಂಡ ಆ ಬಿಂದುಗಳೆಲ್ಲಾ ಸುಮಾರು ‘8’ರ ಆಕೃತಿಯಲ್ಲಿ ಕಾಣುತ್ತವೆ.
ಈ ವಿನ್ಯಾಸವನ್ನು analemma ಎನ್ನುತ್ತಾರೆ. ‘8’ರ ಆಕೃತಿಯ ನೆತ್ತಿಯ ಬಿಂದು summer solstice ದಿನದಂದು ಆಗುತ್ತದೆ. ಆ ಆಕೃತಿಯ ಅಡಿಯ ಬಿಂದು winter solstice, ಅಂದರೆ ಮಕರ ಸಂಕ್ರಾಂತಿಯ ದಿನದಂದು ಆಗುತ್ತದೆ. ನಡುವೆ ರೇಖೆಗಳು ಪರಸ್ಪರ ಹಾದು ಹೋಗುವ ಬಿಂದು equinox ದಿನಗಳು. 8 ರ ಆಕೃತಿಯ ನೆತ್ತಿಯಿಂದ ಅದರ ಅಡಿಯ ಬಿಂದುವಿನ ತನಕದ ದಿನಗಳು ವರ್ಷದ ದಕ್ಷಿಣಾಯನದ ದಿನಗಳು. ಆ ಆಕೃತಿಯ ಅಡಿಯಿಂದ ಅದರ ನೆತ್ತಿಯ ಬಿಂದುವಿನ ತನಕದ ದಿನಗಳು ಉತ್ತರಾಯಣದ ದಿನಗಳು.
ಇದೆ ಕಾಲಕ್ಕೆ ಚಳಿಗಾಲ ಮುಗಿದು ಹೋಗುತ್ತದೆ ಮನುಷ್ಯ ದೇಹದಲ್ಲಿ ಚಳಿಯಿಂದ ಚರ್ಮ ಎಣ್ಣೆ ಅಂಶ ಕಡಿಮೆಯಾಗುತ್ತದೆ ಅದಕ್ಕೆ ಏಣ್ಣಿನ ಅಂಶ ಇರುವ ಎಳ್ಳು ತಿನ್ನಿ ಅನ್ನೋವುದು ವಾಡಿಕೆ ಇರಬಹುದು ಆದರೆ ವೈಜ್ಞಾನಿಕವಾಗಿ ಅದು ಸಾಭೀತಾಗಿದೆ
ಅಂದರೆ ಉತ್ತರಾಯಣದ ಪುಣ್ಯಕಾಲದಂದು ನಾವು ಮಾಡಿದ ದಾನ ಧರ್ಮಗಳು ಜನ್ಮ ಜನ್ಮದಲ್ಲೂ ಸದಾ ನಮಗೆ ಸಿಗುವಂತೆ ಸೂರ್ಯನು ಅನುಗ್ರಹಿಸುತ್ತಾನೆ. ಈ ಶುಭದಿನ ತಿಲದಾನ, ತಿಲಹೋಮ, ತಿಲಭಕ್ಷಣಗಳಿಗೆ ವಿಶೇಷ ಪ್ರಾಶಸ್ತ್ಯವಿದೆ.
ಈ ಹಬ್ಬಕ್ಕೂ ಎಳ್ಳಿಗೂ ನಿಕಟ ಸಂಬಂಧವಿದೆ. ಎಳ್ಳು-ಚಿಗಳಿ ಸಂಕ್ರಾಂತಿ ಎಳ್ಳು, ಎಳ್ಳು ಬೀಸಿ ಬೆಲ್ಲ ಹಾಕಿ ಮಾಡಿದ ಎಳ್ಳು ನೀರು ಅಪ್ಯಾಯಮಾನವಾಗಿರುತ್ತದೆ. ಶೀತ-ವಾತ ಜನ್ಯವಾದ ಜಡ್ಡು ಅಲಸ್ಯಗಳನ್ನು ದೂರ ಮಾಡುವ ಸ್ನೇಹ ದ್ರವ್ಯಗಳ ಹಂಚಿಕೆ, ಸೇವೆನೆ, ದಾನ-ಧರ್ಮ ಈ ಹಬ್ಬದ ವೈಶಿಷ್ಟ್ಯ. ಯುಗಾದಿಯಂದು ಬೇವು-ಬೆಲ್ಲ ಹಂಚುವಂತೆ, ಇಲ್ಲಿ ಎಳ್ಳು-ಬೆಲ್ಲ ಹಂಚುವುದು, ಮನಸ್ಸಿನ ಕಹಿ ಭಾವನೆ ಮರೆತು ಸಿಹಿ ಭಾವ ತುಂಬಿ ಅಮೃತ ಪುತ್ರರಾಗೋಣ ಎಂಬುದರ ದ್ಯೌತಕವಾಗಿದೆ. ಗಣೇಶಚತುರ್ಥಿ, ದೀಪಾವಳಿಗಳಂದು ಕಂಡುಬರುವ ಬಾಹ್ಯಾಡಂಬರ, ಬಾಣ ಬಿರುಸುಗಳೇ ಮುಂತಾದ ವ್ಯರ್ಥವಾದ ಖರ್ಚು-ವೆಚ್ಚಗಳು ಇಲ್ಲದಿರುವುದು ಈ ಹಬ್ಬದ ಅಗ್ಗಳಿಕೆಯೆನ್ನಬಹುದು.
ಎಳ್ಳು – ಬೆಲ್ಲ, ಶೀತ – ವಾತದಿಂದ ಉಂಟಾಗುವ ಜಡ್ಡು, ಆಲಸ್ಯಗಳನ್ನು ದೂರಮಾಡುವ ಸ್ನೇಹ ದ್ರವ್ಯಗಳ ಹಂಚಿಕೆ, ಸೇವನೆ, ದಾನ ಈ ಸಂಕ್ರಾಂತಿಯ ವೈಶಿಷ್ಟ. ಶಿಎಳ್ಳು – ಬೆಲ್ಲ ತಿಂದು ಒಳ್ಳೆ ಮಾತಾಡುಷಿ ಎನ್ನುವುದೇ ಮಕರ ಸಂಕ್ರಾಂತಿಯ ಸಂದೇಶವಾಗಿದೆ.
ವಿಕಿಪೀಡಿಯ ಕೃಪೆ
