ಉಡುಪಿ ಜಿಲ್ಲೆಯ ಸಿದ್ದಾಪುರ ಏತ ನೀರಾವರಿ ಯೋಜನೆ ಸ್ಥಗಿತವಾಗಿರುವುದಕ್ಕೆ ತಾಂತ್ರಿಕ ತೊಂದರೆ ಉಂಟಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಇಂದು ಮಧ್ಯಾಹ್ನ ವಿಧಾನಸಭೆಯಲ್ಲಿ ಶಾಸಕರಾದ ಗುರುರಾಜ್ ಶೆಟ್ಟಿ ಗಂಟೆ ಹೊಳೆ ಅವರು ಗಮನ ಸೆಳೆವ ಸೂಚನೆಯಡಿ ಸ್ಥಗಿತಗೊಂಡಿರುವ ಸಿದ್ದಾಪುರ ಏತ ನೀರಾವರಿ ಯೋಜನೆ ಕಾಮಗಾರಿಯನ್ನು ಪ್ರಾರಂಭಿಸಬೇಕೆಂದು ತಿಳಿಸಿದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಅವರು ಉತ್ತರಿಸುತ್ತಾ, ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಭೇಟಿ ನೀಡಿ ನನಗೆಮಾಹಿತಿ ನೀಡಿದ್ದಾರೆ. ವಿದ್ಯುತ್ ಪೂರೈಕೆಗೆ ನೀರಿನ ಕೊರತೆಯ ತಾಂತ್ರಿಕ ದೋಷ ಕಂಡು ಬಂದಿದೆ. ಅದಷ್ಟು ಶೀಘ್ರ ತಾಂತ್ರಿಕ ಅಧಿಕಾರಿಗಳೊಂದಿಗೆ ಚರ್ಚಿಸಿ ಯೋಜನೆ ಕಾಮಗಾರಿಯನ್ನು ಪ್ರಾರಂಭಿಸಲು ಕ್ರಮ ವಹಿಸಲಾಗುವುದು ಎಂದರು.
