ಶಿಗ್ಗಾಂವಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ 2025-26ನೇ ಸಾಲಿನ ಸಾಕ್ಷ್ಯಚಿತ್ರ ನಿರ್ಮಾಣದ ನಿರ್ದೇಶಕರಾಗಿ ಶಿಗ್ಗಾಂವಿ ತಾಲೂಕಿನ ಕುನ್ನೂರ ಗ್ರಾಮದ ಶಿವಾನಂದ ಆಯ್ಕೆಯಾಗಿದ್ದಾರೆ.
ಎಸ್‌ಸಿಎಸ್‌ಪಿ, ಟಿಎಸ್‌ಪಿ ವಿಶೇಷ ಘಟಕ ಯೋಜನೆಯಡಿ ಪಂಗಡದ ನಿರ್ದೇಶಕರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ರಾಜ್ಯದ ಕಲೆ, ಸಂಸ್ಕೃತಿ, ಜನಪದ ಕಲೆ, ವಿಶಿಷ್ಟ ಸಾಧನೆ ಮಾಡಿದ ಪರಿಶಿಷ್ಟ ಜಾತಿ ವ್ಯಕ್ತಿಗಳು, ಸಾಧಕರು ಮತ್ತು ಎಸ್‌ಸಿ, ಎಸ್‌ಟಿ ಜನರಿಗಾಗಿ ಸರ್ಕಾರ ರೂಪಿಸಿರುವ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಸಾಕ್ಷ್ಯಚಿತ್ರ ನಿರ್ದೇಶಿಸಿ, ನಿರ್ಮಿಸಿ ಕೊಡಲು ಅರ್ಜಿ ಆಹ್ವಾನಿಸಲಾಗಿತ್ತು. ಇದರನ್ವಯ ಪರಿಣತ ತಾಂತ್ರಿಕ ಮೌಲ್ಯಮಾಪನ ಸಮಿತಿಯಲ್ಲಿ ಆಯ್ಕೆಯಾಗಿರುವ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಛಾಯಾ ಮತ್ತು ಚಲನಚಿತ್ರ ಶಾಖೆ ಜಂಟಿ ನಿರ್ದೇಶಕ ಮಂಜುನಾಥ ಡೊಳ್ಳಿನ ಕಾರ್ಯಾದೇಶ ನೀಡಿದ್ದಾರೆ. ಶಿವಾನಂದ ದೊಡ್ಡಮನಿ ಅವರ ನಿರ್ದೇಶನದ ಸಾಕ್ಷ್ಯಚಿತ್ರ ನಿರ್ಮಾಣಕ್ಕೆ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ. ವೆಂಕನಗೌಡ ಪಾಟೀಲ ಮಾರ್ಗದರ್ಶನ ನೀಡಿದ್ದಾರೆ.
