ಬಾಗಲಕೋಟೆ.3
👇
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಿರೂರು ಚನ್ನಯ್ಯನಗರದಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಭಾಗವಹಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಬಹುಮತದ ಗೆಲುವು ದೊರಕಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷ ಬಡವರ ಬದುಕಿಗೆ ಭದ್ರತೆ ನೀಡುವ ನಿಟ್ಟಿನಲ್ಲಿ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು. ಬಡವರಿಗೆ ಅಕ್ಕಿ ದೊರೆಯಬೇಕು, ಅವರು ನೆಮ್ಮದಿಯಾಗಿ ಊಟ ಮಾಡಬೇಕು ಮತ್ತು ಗೌರವಯುತ ಜೀವನ ನಡೆಸಬೇಕು ಎಂಬ ಉದ್ದೇಶದಿಂದಲೇ ಕಾಂಗ್ರೆಸ್ ಪಕ್ಷ ಕಾರ್ಯಕ್ರಮಗಳನ್ನು ರೂಪಿಸಿದೆ ಸೋನಿಯಾ ಗಾಂಧಿಯವರ ನಾಯಕತ್ವದಲ್ಲಿ ಕಡುಬಡವರಿಗಾಗಿ ಆಹಾರ ಭದ್ರತೆ ಕಾಯ್ದೆ ಜಾರಿಗೆ ತರಲಾಯಿತು. ದೇಶದಲ್ಲಿ ಯಾವುದೇ ಸರ್ಕಾರ ಇದ್ದರೂ ಬಡವರಿಗೆ ಅಕ್ಕಿ ನೀಡಲೇಬೇಕು ಎಂಬ ದೃಷ್ಟಿಯಿಂದ ಈ ಕಾನೂನು ರೂಪಿಸಲಾಗಿದೆ ಎಂದು ಹೇಳಿದರು.
2013ರಲ್ಲಿ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಬಡವರಿಗೆ ಉಚಿತ ಅಕ್ಕಿ ವಿತರಣೆ ಯೋಜನೆಯನ್ನು ಜಾರಿಗೆ ತಂದು, ಜನರಿಗೆ ನೆಮ್ಮದಿಯ ಜೀವನವನ್ನು ಕಲ್ಪಿಸಿದರು. ಬಳಿಕವೂ ಈ ಯೋಜನೆಯನ್ನು ಮತ್ತಷ್ಟು ಬಲಪಡಿಸಿ, ಅಕ್ಕಿಯ ಜೊತೆಗೆ ಹಣ ಸಹಾಯ ನೀಡುವ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.
ಇದೊಂದೇ ಅಲ್ಲ, ರಾಜ್ಯ ಸರ್ಕಾರ ನಾಲ್ಕು–ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರಿಗೆ ಮಾಸಿಕ ₹2000 ಆರ್ಥಿಕ ನೆರವು, ಉಚಿತ ವಿದ್ಯುತ್, ಉದ್ಯೋಗಕ್ಕಾಗಿ ತರಬೇತಿ, ಮಕ್ಕಳಿಗೆ ಶಿಕ್ಷಣ ಸೌಲಭ್ಯ—ಇವೆಲ್ಲವೂ ಬಡವರ ಬದುಕು ಸುಧಾರಿಸುವ ಕಾಂಗ್ರೆಸ್ ಪಕ್ಷದ ಬದ್ಧತೆಯನ್ನು ತೋರಿಸುತ್ತವೆ ಎಂದು ಹೇಳಿದರು.
ಹಿಂದಿನ ದಿನಗಳಲ್ಲಿ ಕೂಲಿ ಕೆಲಸ ಸಿಕ್ಕಾಗ ಮಾತ್ರ ಊಟ ಸಿಗುತ್ತಿತ್ತು. ಭೂಮಿ ಇಲ್ಲದ ಅನೇಕರು ಸಂಕಷ್ಟದಲ್ಲಿ ಬದುಕುತ್ತಿದ್ದರು. ಇಂತಹ ಪರಿಸ್ಥಿತಿಯನ್ನು ಬದಲಿಸಲು ಕಾಂಗ್ರೆಸ್ ಪಕ್ಷ ಕಾರ್ಯಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದೆ. ಇಂದು ಬಡವರು ಕನಿಷ್ಠ ಆಹಾರ ಭದ್ರತೆಯನ್ನು ಹೊಂದಿದ್ದಾರೆ, ಎಂದು ಹೇಳಿದರು.
ಮಾಜಿ ಪ್ರಧಾನಮಂತ್ರಿ ಇಂದಿರಾಗಾಂಧಿ ಅವರ ಬಡಪರ ಚಿಂತನೆಗಳನ್ನು ಸ್ಮರಿಸಿ, ಕಾಂಗ್ರೆಸ್ ಪಕ್ಷ ಸದಾ ಬಡವರ ಪರ ನಿಂತಿದೆ ಎಂದು ಹೇಳಿದರು.
ಬಡವರ ಅಭಿವೃದ್ಧಿಗಾಗಿ ಜಾರಿಗೆ ತಂದಿರುವ ಯೋಜನೆಗಳನ್ನು ಮುಂದುವರಿಸಲು ಕಾಂಗ್ರೆಸ್ ಪಕ್ಷಕ್ಕೆ ಮತ್ತೊಮ್ಮೆ ಆಶೀರ್ವಾದ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದರಾದ ಚಂದ್ರಪ್ಪ ಹಾಗೂ ನಾಯಕರು ಮುಖಂಡರು ಉಪಸ್ಥಿತರಿದ್ದರು
