Sunday, May 17, 2026
Homeಟಾಪ್ ನ್ಯೂಸ್ಹೊರಮಾವಿನಲ್ಲಿ “ನನ್ನ ಇ-ಖಾತಾ, ನನ್ನ ಹಕ್ಕು” ಅಭಿಯಾನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಪ್ರಕ್ರಿಯೆ ಪರಿಶೀಲನೆ

ಹೊರಮಾವಿನಲ್ಲಿ “ನನ್ನ ಇ-ಖಾತಾ, ನನ್ನ ಹಕ್ಕು” ಅಭಿಯಾನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಪ್ರಕ್ರಿಯೆ ಪರಿಶೀಲನೆ

ಬೆಂಗಳೂರು:ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೊರಮಾವಿನ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಶನಿವಾರದಂದು ಆರಂಭವಾದ “ನನ್ನ ಇ-ಖಾತಾ, ನನ್ನ ಹಕ್ಕು” ಅಭಿಯಾನ ಕೇಂದ್ರಕ್ಕೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಅಭಿಯಾನದ ಪ್ರಗತಿ ಹಾಗೂ ಇ-ಖಾತಾ ವಿತರಣಾ ಪ್ರಕ್ರಿಯೆಯನ್ನು ಹತ್ತಿರದಿಂದ ವೀಕ್ಷಿಸಿದ ಡಿಸಿಎಂ ಅವರು, ಸ್ಥಳದಲ್ಲಿದ್ದ ನಾಗರಿಕರ ಅಹವಾಲುಗಳನ್ನು ಅತ್ಯಂತ ತಾಳ್ಮೆಯಿಂದ ಆಲಿಸಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಯಾವುದೇ ಅಡೆತಡೆಯಿಲ್ಲದೆ, ಪಾರದರ್ಶಕವಾಗಿ ಆಸ್ತಿ ದಾಖಲೆಗಳನ್ನು ಒದಗಿಸುವುದೇ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ವಿವರಿಸಿದರು.

ಗಣ್ಯರ ಉಪಸ್ಥಿತಿ:
ಈ ಸಂದರ್ಭದಲ್ಲಿ ಶಾಸಕ ಬೈರತಿ ಬಸವರಾಜ್, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿ ನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಹಾಗೂ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅವರು ಉಪಸ್ಥಿತರಿದ್ದರು.
ಉಳಿದಂತೆ ಪೂರ್ವ ನಗರ ಪಾಲಿಕೆ ಆಯುಕ್ತ ರಮೇಶ್ ಡಿ.ಎಸ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್, ಶ್ರೀನಿವಾಸ್, ಪೂರ್ವ ನಗರ ಪಾಲಿಕೆ ಗ್ಯಾರಂಟಿ ಯೋಜನೆ ಅಧ್ಯಕ್ಷೆ ಶಾಂಭವಿ, ಅಭಿವೃದ್ಧಿ ಆಯುಕ್ತ ಲೋಖಂಡೆ ಸ್ನೇಹಲ್ ಸುಧಾಕರ್ ಹಾಗೂ ಜಂಟಿ ಆಯುಕ್ತರಾದ ದಾಕ್ಷಾಯಿಣಿ, ಸುಧಾ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದು, ಅಭಿಯಾನದ ಯಶಸ್ಸಿಗೆ ಸಾಕ್ಷಿಯಾದರು.

ಹೆಚ್ಚಿನ ಸುದ್ದಿ