ಆತ್ಮೀಯ ಕಾಂಗ್ರೆಸ್ ಪಕ್ಷದ ಮುಖಂಡರೆ ಹಾಗೂ ಕಾರ್ಯಕರ್ತರೇ, ನಾಳೆ 04-06-2026 ರಂದು ಗುರುವಾರ ಬೆಳಿಗ್ಗೆ 10-00 ಗಂಟೆಗೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕರು ಕೆಡಿಸಿಸಿ ಬ್ಯಾಂಕಿನ ಅಧ್ಯಕ್ಷರು ಬಡವರು ಹಾಗೂ ದೀನ ದಲಿತರ ನಾಯಕರು ಆದ ಸನ್ಮಾನ್ಯ ಶ್ರೀ ಶಿವರಾಮ್ ಹೆಬ್ಬಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಗುವುದು. ನಂತರ 11:00ಗೆ ಅಂದ ಮಕ್ಕಳ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿನಿಯರಿಗೆ ಊಟದ ವ್ಯವಸ್ಥೆಯನ್ನು ಹಮ್ಮಿಕೊಳ್ಳಲಾಗಿದ್ದು, ಕಾರಣ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಆಗಮಿಸಬೇಕೆಂದು ವಿನಂತಿ.
ಶ್ರೀ ಡಿಕೆ ನಡಗೇರ
ಅಧ್ಯಕ್ಷರು
ತಾಲೂಕ ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗ ಮುಂಡಗೋಡ
ಶ್ರೀ ಕೃಷ್ಣ ಎಚ್ ಹಿರೇಹಳ್ಳಿ
ಅಧ್ಯಕ್ಷರು
ತಾಲೂಕ ಬ್ಲಾಕ್ ಕಾಂಗ್ರೆಸ್ ಸಮಿತಿ ಮುಂಡಗೋಡ
