Wednesday, June 10, 2026
Homeಜಿಲ್ಲಾ ಸುದ್ದಿಗಳುಅಥಣಿಯ ವಿಕ್ರಮಪುರದ ಶಾಲೆಯಲ್ಲಿ ಸಡಗರದ ವಿಶ್ವ ಪರಿಸರ ದಿನಾಚರಣೆ: ಪರಿಸರ ಸಂರಕ್ಷಣೆಗೆ ಕರೆ..

ಅಥಣಿಯ ವಿಕ್ರಮಪುರದ ಶಾಲೆಯಲ್ಲಿ ಸಡಗರದ ವಿಶ್ವ ಪರಿಸರ ದಿನಾಚರಣೆ: ಪರಿಸರ ಸಂರಕ್ಷಣೆಗೆ ಕರೆ..

ಅಥಣಿ: ಜೂನ್ 5 ರಂದು ವಿಶ್ವ ಪರಿಸರ ದಿನದ ಅಂಗವಾಗಿ, ಅಥಣಿ ಪಟ್ಟಣದ ವಿಕ್ರಮಪುರದಲ್ಲಿರುವ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಮತ್ತು ಉನ್ನತೀಕರಿಸಿದ ಪ್ರೌಢಶಾಲೆಯ ಆವರಣದಲ್ಲಿ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಭಾಗವಾಗಿ ಶಾಲೆಯ ಎಸ್.ಡಿ.ಎಮ್.ಸಿ. ಅಧ್ಯಕ್ಷ ರಾಕೇಶ ಮೈಗೂರ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಪರಿಸರ ಸಂರಕ್ಷಣೆಯು ಕೇವಲ ಒಂದು ದಿನದ ಆಚರಣೆಯಲ್ಲ, ಅದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ದಿನೇ ದಿನೇ ಏರುತ್ತಿರುವ ತಾಪಮಾನವನ್ನು ನಿಯಂತ್ರಿಸಲು ಮತ್ತು ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ತಮ್ಮ ಮನೆಗಳ ಮುಂದೆ ಕನಿಷ್ಠ ಒಂದು ಮರವನ್ನಾದರೂ ನೆಟ್ಟು ಪೋಷಿಸಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿವರ್ಗ, ಎಸ್.ಡಿ.ಎಮ್.ಸಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡು ಪರಿಸರ ಸಂರಕ್ಷಣೆ ಮಾಡುವ ಪ್ರತಿಜ್ಞೆ ಸ್ವೀಕರಿಸಿದರು.

ಹೆಚ್ಚಿನ ಸುದ್ದಿ