Tuesday, June 23, 2026
Homeಅಪಘಾತಮೈನಳ್ಳಿ ಸಮೀಪದ ಸಣ್ಣ ಸೇತುವೆಯ ತಡೆಗೋಡೆಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ

ಮೈನಳ್ಳಿ ಸಮೀಪದ ಸಣ್ಣ ಸೇತುವೆಯ ತಡೆಗೋಡೆಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ

ಸೇತುವೆ ಸಮೀಪ ಸುರಕ್ಷತಾ ನಾಮಫಲಕಗಳು ಹಾಗೂ ಎಚ್ಚರಿಕೆ ಸೂಚನಾ ಫಲಕಗಳನ್ನು ಅಳವಡಿಸಿ, ಅಪಘಾತಗಳು ಮರುಕಳಿಸಿದಂತೆ ತಡೆಯಲು ಅಗತ್ಯ

ಮುಂಡಗೋಡ, ಜೂನ್ 22 : ತಾಲೂಕಿನ ಮೈನಳ್ಳಿ ಸಮೀಪದ ಸಣ್ಣ ಸೇತುವೆಯ ತಡೆಗೋಡೆಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದ ಪರಿಣಾಮ  ಅಪಘಾತ ಸಂಭವಿಸಿತು. ಮಾನ್ಯ ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಸಂಬಂಧಿತ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತ ಸಂಭವಿಸಿದ ಸ್ಥಳದ ಪರಿಸ್ಥಿತಿಯನ್ನು ಅವಲೋಕಿಸಿದ ಅವರು, ಸಾರ್ವಜನಿಕರ ಹಾಗೂ ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಶೇಷವಾಗಿ ಸೇತುವೆ ಸಮೀಪ ಸುರಕ್ಷತಾ ನಾಮಫಲಕಗಳು ಹಾಗೂ ಎಚ್ಚರಿಕೆ ಸೂಚನಾ ಫಲಕಗಳನ್ನು ಅಳವಡಿಸಿ, ಅಪಘಾತಗಳ ಮರುಕಳಿಕೆಯನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ವರದಿ: ಬಸಯ್ಯ ತೋಟಯ್ಯನವರ

ಹೆಚ್ಚಿನ ಸುದ್ದಿ