ಅಥಣಿ, : ತಾಲೂಕಿನ ಕೊಕಟನೂರ ಗ್ರಾಮದ ಪಶು ವೈದ್ಯಕೀಯ ಕಾಲೇಜಿನಲ್ಲಿ ವನಮಹೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು, “ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹೆಚ್ಚುತ್ತಿರುವ ಮಾಲಿನ್ಯ ಮತ್ತು ಹವಾಮಾನ ವೈಪರೀತ್ಯದ ಸವಾಲುಗಳನ್ನು ಎದುರಿಸಲು ವೃಕ್ಷಾರೋಪಣೆಯೇ ಪರಿಣಾಮಕಾರಿ ಮಾರ್ಗವಾಗಿದೆ. ವಿದ್ಯಾರ್ಥಿಗಳು ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ತಮ್ಮ ಜೀವನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಸಂಕಲ್ಪ ಮಾಡಬೇಕು. ಮರಗಳು ಪ್ರಕೃತಿಯ ಅಮೂಲ್ಯ ಕೊಡುಗೆಯಾಗಿದ್ದು, ಮುಂದಿನ ಪೀಳಿಗೆಗೆ ಹಸಿರು ಪರಿಸರವನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ಶಾಮರಾವ ಪೂಜಾರಿ, ಡಾ. ಗಂಗಾನಾಯ್ಕ ಎಸ್, ಶ್ರೀಮತಿ ರಾಜೇಶ್ವರಿ ಈರನಟ್ಟಿ, ಕೆಂಪಣ್ಣ ವಣ್ಣೂರ, ಡಾ. ಲಕ್ಷ್ಮಣ ಜಾಧವ, ರಾಕೇಶ ಅರ್ಜುನವಾಡ, ಮಲ್ಲಪ್ಪ ತೇಲಿ, ಪ್ರವೀಣ ಪಾಟೀಲ ಸೇರಿದಂತೆ ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
