Tuesday, July 14, 2026
HomeUncategorizedಭಾರತೀಯ ಜನತಾ ಪಕ್ಷದ ಮುಖಂಡರು ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಮತ್ತು ಜನಪರ ನೀತಿಗಳನ್ನು ಮೆಚ್ಚಿ...

ಭಾರತೀಯ ಜನತಾ ಪಕ್ಷದ ಮುಖಂಡರು ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಮತ್ತು ಜನಪರ ನೀತಿಗಳನ್ನು ಮೆಚ್ಚಿ ಇಂದು ಭಾರತೀಯ ಜನತಾ ಪಕ್ಷವನ್ನು ತೊರೆದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ..

ಮುಂಡಗೋಡ, ಜುಲೈ 14 : ಭಾರತೀಯ ಜನತಾ ಪಕ್ಷದ ಮುಖಂಡ ಡಿ.ಎಫ್. ಮಡ್ಲಿ ಹಾಗೂ ಅವರ ಬೆಂಬಲಿಗರು ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಮತ್ತು ಜನಪರ ನೀತಿಗಳನ್ನು ಮೆಚ್ಚಿ ಇಂದು ಭಾರತೀಯ ಜನತಾ ಪಕ್ಷವನ್ನು ತೊರೆದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕೆಪಿಸಿಸಿ ಸದಸ್ಯರಾದ ವಿವೇಕ್ ಹೆಬ್ಬಾರ್ ಅವರು ಡಿ.ಎಫ್. ಮಡ್ಲಿ ಹಾಗೂ ಅವರ ಬೆಂಬಲಿಗರಿಗೆ ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ ಪಕ್ಷದ ಸಂಘಟನೆ ಮತ್ತಷ್ಟು ಬಲಿಷ್ಠವಾಗುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಈ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕೃಷ್ಣ ಹಿರೇಹಳ್ಳಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾರದಾ ರಾಠೋಡ, ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿಯ ತಾಲೂಕು ಅಧ್ಯಕ್ಷರಾದ ದೇವು ಪಾಟೀಲ್, ಪ್ರಚಾರ ಸಮಿತಿಯ ಅಧ್ಯಕ್ಷರಾದ ಕೆ.ಸಿ. ಗಲಬಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಮಹಮ್ಮದ್ ಗೌಸ್ ಮಕಾನದಾರ್, ಸಾಮಾಜಿಕ ಜಾಲತಾಣ ಘಟಕದ ಅಧ್ಯಕ್ಷರಾದ ಧರ್ಮರಾಜ ನಾಡಿಗೇರ್, ಘಟಕಾಧ್ಯಕ್ಷರಾದ ರಾಮಚಂದ್ರ ಗುಲ್ಯಾನವರ್, ಪ್ರಮುಖರಾದ ನಾಗಭೂಷಣ ಹಾವಣಗಿ, ಗೋಪಾಲ್ ಪಾಟೀಲ್, ರಜಾ ಫಠಾಣ, ರಫೀಕ್ ಇನಾಮದಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಬೆಂಬಲಿಗರು ಉಪಸ್ಥಿತರಿದ್ದರು.

ವರದಿಗಾರರು: ಬಸಯ್ಯ ತೋಟಯ್ಯನವರ

ಹೆಚ್ಚಿನ ಸುದ್ದಿ