Saturday, August 8, 2026
Homeಟಾಪ್ ನ್ಯೂಸ್ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ: ಹಿರಿಯ ಪತ್ರಕರ್ತ ಉದಯಕುಮಾರ್ ಅವರಿಗೆ ಗೌರವ

ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ: ಹಿರಿಯ ಪತ್ರಕರ್ತ ಉದಯಕುಮಾರ್ ಅವರಿಗೆ ಗೌರವ

ಬೆಂಗಳೂರು:
ಹಿರಿಯ ಪತ್ರಕರ್ತ ಹಾಗೂ ‘ಪ್ರಜಾವಾಣಿ’ಯ ನಿವೃತ್ತ ಸಹಾಯಕ ಸಂಪಾದಕ ಉದಯಕುಮಾರ್ ಅವರಿಗೆ ಪ್ರತಿಷ್ಠಿತ ‘ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು.

ಖಾದ್ರಿ ಶಾಮಣ್ಣ ಟ್ರಸ್ಟ್ ವತಿಯಿಂದ ಇಂದು ನಗರದ ಶೇಷಾದ್ರಿಪುರಂ ಕಾಲೇಜಿನ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಭವ್ಯ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದಯಕುಮಾರ್ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಿದರು.

ಗಣ್ಯರ ಉಪಸ್ಥಿತಿ
ಸಮಾರಂಭದಲ್ಲಿ ನಾಡಿನ ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ, ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ವೂಡೇ ಪಿ. ಕೃಷ್ಣ, ಹಿರಿಯ ಪತ್ರಕರ್ತ ಕೆ.ವಿ. ನಾಗರಾಜು, ಟ್ರಸ್ಟ್ ಅಧ್ಯಕ್ಷ ಶ್ರೀಶ ಹಾಗೂ ಶ್ರೀಮತಿ ಸುನಿತಾ ಉದಯಕುಮಾರ್ ಉಪಸ್ಥಿತರಿದ್ದರು.

ಹೆಚ್ಚಿನ ಸುದ್ದಿ