Tuesday, August 11, 2026
HomeUncategorizedಬಸವಣ್ಣನನ್ನೇ ಬಿಡಲಿಲ್ಲ.. ನಾನ್ಯಾರು..; ಅವರಿಗೆ ಸಚಿವ ಸ್ಥಾನ ಸಿಗದಿರಲು ನಾನು ಕಾರಣ ಅಲ್ಲ': ಎಂ.ಬಿ ಪಾಟೀಲ್...

ಬಸವಣ್ಣನನ್ನೇ ಬಿಡಲಿಲ್ಲ.. ನಾನ್ಯಾರು..; ಅವರಿಗೆ ಸಚಿವ ಸ್ಥಾನ ಸಿಗದಿರಲು ನಾನು ಕಾರಣ ಅಲ್ಲ’: ಎಂ.ಬಿ ಪಾಟೀಲ್ ಸ್ಪಷ್ಟನೆ,

Video
ಈ ವಿಚಾರದಲ್ಲಿ ತಾನು ಬಲವಾಗಿ ಪ್ರತಿಪಾದನೆ ಮಾಡಿದ್ದರೂ, ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೈಗೊಳ್ಳುತ್ತಾರೆ.

ವಿಜಯಪುರ: ಕರ್ನಾಟಕ ಸಚಿವ ಸಂಪುಟದ ಎರಡನೇ ಹಂತದ ವಿಸ್ತರಣೆಯಲ್ಲಿ ಶಾಸಕರಾದ ಸಿ.ಎಸ್. ನಾಡಗೌಡ ಹಾಗೂ ಯಶವಂತರಾಯಗೌಡ ಪಾಟೀಲ್ ಅವರಿಗೆ ಸಚಿವ ಸ್ಥಾನ ಕೈತಪ್ಪಲು ತಾನೇ ಕಾರಣ ಎಂಬ ಆರೋಪವನ್ನು ಸಚಿವ ಎಂಬಿ ಪಾಟೀಲ್ ತಳ್ಳಿಹಾಕಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಬಿ ಪಾಟೀಲ್, ‘ಸಚಿವ ಸ್ಥಾನ ನೀಡುವ ಅಂತಿಮ ನಿರ್ಧಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹೈಕಮಾಂಡ್‌ಗೆ ಸೇರಿದ್ದು’ ಎಂದು ಸ್ಪಷ್ಟಪಡಿಸಿದರು.

ವಿಜಯಪುರ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ನೀಡಬೇಕು ಎಂದು ನಾನೇ ಒತ್ತಾಯಿಸಿದ್ದಾಗಿ ಅವರು ಹೇಳಿದರು. ಈ ವಿಚಾರದಲ್ಲಿ ತಾನು ಬಲವಾಗಿ ಪ್ರತಿಪಾದನೆ ಮಾಡಿದ್ದರೂ, ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ರಾಹುಲ್ ಗಾಂಧಿ ಅವರು ಕೈಗೊಳ್ಳುತ್ತಾರೆ ಎಂದರು.

‘ನಾನೇ ಸಚಿವ ಸ್ಥಾನ ತಪ್ಪಿಸಿದ್ದೇನೆ ಎಂಬ ಆರೋಪ ಸರಿಯಲ್ಲ’

ಸಿ.ಎಸ್. ನಾಡಗೌಡ ಹಾಗೂ ಯಶವಂತರಾಯಗೌಡ ಪಾಟೀಲ್ ಅವರು ತಮಗೆ ಸಚಿವ ಸ್ಥಾನ ಸಿಗದಿರಲು ಎಂಬಿ ಪಾಟೀಲ್ ಕಾರಣ ಎಂದು ಆರೋಪಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದರು.

“ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ನೀಡಬೇಕು ಎಂದು ನಾನೇ ಒತ್ತಾಯಿಸಿದ್ದೆ. ಅಂತಿಮ ನಿರ್ಧಾರವನ್ನು ಹೈಕಮಾಂಡ್‌ಗೆ ಬಿಡಲಾಗಿತ್ತು. ಸಚಿವ ಸ್ಥಾನ ಏಕೆ ಸಿಗಲಿಲ್ಲ ಎಂಬುದನ್ನು ತಿಳಿದುಕೊಳ್ಳಬೇಕಾದರೆ ಅವರು ಮುಖ್ಯಮಂತ್ರಿ, ಎಐಸಿಸಿ ಅಧ್ಯಕ್ಷರು, ಸುರ್ಜೇವಾಲಾ ಹಾಗೂ ರಾಹುಲ್ ಗಾಂಧಿ ಅವರನ್ನು ಕೇಳಬೇಕು” ಎಂದು ಹೇಳಿದರು.

‘ಬಸವಣ್ಣನನ್ನೇ ಬಿಡಲಿಲ್ಲ, ಇನ್ನು ನಾನ್ಯಾರು?’

ಸಚಿವ ಸ್ಥಾನ ಹಂಚಿಕೆ ವಿಚಾರದ ಆರೋಪ-ಪ್ರತ್ಯಾರೋಪಗಳಿಂದ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗುತ್ತಿದೆ ಎಂಬ ಪ್ರಶ್ನೆಗೆ ಎಂಬಿ ಪಾಟೀಲ್ ಅವರು ಮಾರ್ಮಿಕವಾಗಿ ಪ್ರತಿಕ್ರಿಯಿಸಿದರು. “ಬಸವಣ್ಣನನ್ನೇ ಬಿಡಲಿಲ್ಲ; ಇನ್ನು ನಾನ್ಯಾರು?” ಎಂದು ಹೇಳುವ ಮೂಲಕ ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡಿದರು.

ಹೆಚ್ಚಿನ ಸುದ್ದಿ