Sunday, August 16, 2026
HomeUncategorizedಕಾನೂನು ಹೇಳಿದಂತೆ ನಡೆಯುತ್ತೇವೆ: ಸಿಎಂ ಡಿ ಕೆ ಶಿವಕುಮಾರ್

ಕಾನೂನು ಹೇಳಿದಂತೆ ನಡೆಯುತ್ತೇವೆ: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಸಿಎಂ ಕುಮಾರ ಸ್ವಾಮಿ ಅವರ ನೈಸ್ ಯೋಜನೆ ಪತ್ರಕ್ಕೆ ಪ್ರತಿಕ್ರಿಯೆ

ಬೆಂಗಳೂರು, ಆ.16: ‘ನೈಸ್ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಏನು ಹೇಳುತ್ತದೆಯೋ ಹಾಗೆ ನಾವು ನಡೆದುಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಮಾಜಿ‌‌ ಸಿಎಂ‌ ಕುಮಾರಸ್ವಾಮಿ ಅವರು ನೈಸ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದ ಬಗ್ಗೆ ಕೇಳಿದಾಗ, ‘ಮಾಜಿ ಸಿಎಂ ಕುಮಾರ ಸ್ವಾಮಿ ಅವರು ಪತ್ರ ಬರೆದಿರುವುದು ನಿಜ.‌ ಪತ್ರ ಇನ್ನು ಓದಿಲ್ಲ. ಓದಿ, ವಿಚಾರ ತಿಳಿದು ಕಾನೂನಿನ ಚೌಕಟ್ಟಿನಲ್ಲಿ ಮಾಡಬಹುದಾದ ಕೆಲಸಗಳ ಬಗ್ಗೆ ಪರಿಶೀಲನೆ ನಡೆಸುತ್ತೇನೆ’ ಎಂದರು.

ಹೆಚ್ಚಿನ ಸುದ್ದಿ