Tuesday, August 18, 2026
HomeUncategorizedಕರ್ನಾಟಕ ವಿಧಾನ ಪರಿಷತ್ತಿನಲ್ಲಿ ರಾಜಕೀಯ ಸಂಚಲನ: ಉಮಾಶ್ರೀ ಉಪಸಭಾಪತಿಯಾಗಿ ಅವಿರೋಧ ಆಯ್ಕೆ

ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ರಾಜಕೀಯ ಸಂಚಲನ: ಉಮಾಶ್ರೀ ಉಪಸಭಾಪತಿಯಾಗಿ ಅವಿರೋಧ ಆಯ್ಕೆ

ಬೆಂಗಳೂರು:
ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಹುದ್ದೆಗೆ ಹಿರಿಯ ರಾಜಕಾರಣಿ ಹಾಗೂ ಚಿರಪರಿಚಿತ ನಟಿ ಡಾ. ಉಮಾಶ್ರೀ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ವಿಧಾನ ಪರಿಷತ್ತಿನ ಉನ್ನತ ಸಾವಿಧಾನಿಕ ಸ್ಥಾನಕ್ಕೆ ಮತ್ತೊಬ್ಬ ಸಮರ್ಥ ಮಹಿಳಾ ನಾಯಕಿಯೊಬ್ಬರು ಏರಿದ್ದಾರೆ.

ಉಪಸಭಾಪತಿಯಾಗಿ ಆಯ್ಕೆಯಾದ ಉಮಾಶ್ರೀ ಅವರನ್ನು ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್, ಸಭಾ ನಾಯಕರು ಹಾಗೂ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಹಾಗು ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ವಿವಿಧ ಪಕ್ಷಗಳ ಗಣ್ಯರು ಹಾಗೂ ವಿಧಾನ ಪರಿಷತ್ ಸದಸ್ಯರು ಆತ್ಮೀಯವಾಗಿ ಅಭಿನಂದಿಸಿ, ಶುಭ ಹಾರೈಸಿದರು.

ವಿರೋಧ ಪಕ್ಷದ ತಂತ್ರಗಾರಿಕೆ ಮುಂದುವರಿಕೆ:

ಮುಖ್ಯ ಸಚೇತಕರಾಗಿ ಎನ್. ರವಿಕುಮಾರ್ ಸಕ್ರಿಯ
ಮತ್ತೊಂದೆಡೆ, ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ಪಾತ್ರವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷದ ಹಿರಿಯ ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್ ಅವರು ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ (Chief Whip) ತಮ್ಮ ಜವಾಬ್ದಾರಿಯನ್ನು ಮುಂದುವರೆಸಿದ್ದಾರೆ.

ಸದನದಲ್ಲಿ ಸರ್ಕಾರದ ಆಡಳಿತ ವೈಖರಿಯನ್ನು ಪ್ರಶ್ನಿಸುವಲ್ಲಿ ಮತ್ತು ಪಕ್ಷದ ಕಾರ್ಯತಂತ್ರಗಳನ್ನು ರೂಪಿಸುವಲ್ಲಿ ಇವರ ಪಾತ್ರ ನಿರ್ಣಾಯಕವಾಗಿದೆ. ಒಟ್ಟಾರೆಯಾಗಿ ನೂತನ ಹುದ್ದೆಗಳ ಅಲಂಕಾರ ಮತ್ತು ಹಿರಿಯ ಮುಖಂಡರ ನೇಮಕದಿಂದ ರಾಜ್ಯ ವಿಧಾನ ಪರಿಷತ್ತಿನ ರಾಜಕೀಯ ವಲಯದಲ್ಲಿ ಹೊಸ ಚೈತನ್ಯ ಮೂಡಿದೆ.

ನೂತನ ಸಭಾಪತಿ ಹಾಗೂ ಪರಿಷತ್ ರಾಜಕೀಯ ಬೆಳವಣಿಗೆಗಳ ವಿಡಿಯೋ ವರದಿ
ವಿಧಾನ ಪರಿಷತ್ತಿನ ನೂತನ ರಾಜಕೀಯ ಬೆಳವಣಿಗೆಗಳು ಮತ್ತು ನಾಯಕರ ಆಯ್ಕೆಯ ಸಮಗ್ರ ವಿವರಗಳನ್ನು ಈ ವಿಡಿಯೋದಲ್ಲಿ ಸ್ಪಷ್ಟವಾಗಿ ವಿವರಿಸಲಾಗಿದೆ.

ಹೆಚ್ಚಿನ ಸುದ್ದಿ