ಕಲಬುರಗಿ: ಕಲಬುರಗಿ ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಿ. ಶರಣಮ್ಮ, WHC ಅವರು ಅಕಾಲಿಕವಾಗಿ ನಿಧನರಾಗಿದ್ದಾರೆ.
ಅವರ ಅಗಲಿಕೆಗೆ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯ ಘಟಕದ ವತಿಯಿಂದ ತೀವ್ರ ಸಂತಾಪ ವ್ಯಕ್ತಪಡಿಸಲಾಗಿದೆ. ಮೃತರ ಕುಟುಂಬಸ್ಥರು ಹಾಗೂ ಬಂಧು-ಬಳಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪೊಲೀಸ್ ಇಲಾಖೆ ಪ್ರಾರ್ಥಿಸಿದೆ.
ಅಗಲಿದ ಪವಿತ್ರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿ ದೊರೆಯಲಿ ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವತಿಯಿಂದ ಕಂಬನಿ ಮಿಡಿಯಲಾಗಿದೆ.
