Wednesday, September 30, 2026
Homeಜಿಲ್ಲಾ ಸುದ್ದಿಗಳುಉತ್ತರ ಕನ್ನಡರೈತರು ಮತ್ತು ಯೋಧರ ಅರ್ಜಿಗಳಿಗೆ ಸಕಾಲದಲ್ಲಿ ಮಾಹಿತಿ ನೀಡದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಜರುಗಿಸಿ...

ರೈತರು ಮತ್ತು ಯೋಧರ ಅರ್ಜಿಗಳಿಗೆ ಸಕಾಲದಲ್ಲಿ ಮಾಹಿತಿ ನೀಡದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಜರುಗಿಸಿ ದಂಡ ಮತ್ತು ಇಲಾಖಾ ವಿಚಾರಣೆಗೆ ಆದೇಶಿಸಿದೆ: ಪ್ರಕಾಶ ನಾರಾಯಣ ಚನ್ನಾಳ.

ಕಾರವಾರ,:- ರಾಷ್ಟ್ರದ ಬೆನ್ನೆಲುಬಾದ ರೈತ ಸಮುದಾಯ ಮತ್ತು ಗಡಿ ಕಾಯುವ ಯೋಧರ ಕುಟುಂಬರಸ್ಥರ ಅರ್ಜಿಗಳಿಗೆ ನಿಗದಿತ ಸಮಯದಲ್ಲಿ, ಸಕಾಲಕ್ಕೆ ಮಾಹಿತಿ ನೀಡದೆ ನಿರ್ಲಕ್ಷವಹಿಸಿದ ಹಲವಾರು ಇಲಾಖೆಯ ಅಧಿಕಾರಿಗಳಿಗೆ ಶಿಸ್ತು ಕ್ರಮ ಜರುಗಿಸಿ ದಂಡ ಮತ್ತು ಇಲಾಖಾ ವಿಚಾರಣೆಗೆ ಶಿಫಾರಸ್ಸು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಬೆಳಗಾವಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಪ್ರಕಾಶ ನಾರಾಯಣ ಚನ್ನಾಳ ತಿಳಿಸಿದ್ದಾರೆ.
ಮಾಹಿತಿ ಹಕ್ಕು ಕಾಯ್ದೆಯು ಭಾರತದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಆಡಳಿತದ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಕಾಯ್ದುಕೊಳ್ಳಲು ಅತ್ಯಂತ ಪ್ರಮುಖವಾದ ಕಾಯ್ದೆಯಾಗಿದೆ. ಅನ್ನದಾತ ರೈತರ ಮತ್ತು ಗಡಿ ಕಾಯುವ ಯೋಧರ ಕುಟುಂಬಗಳ ಅರ್ಜಿಗಳಿಗೆ ಸ್ಪಂದಿಸಿ ಕಾಲಮಿತಿಯೊಳಗೆ ಸರಿಯಾದ ಮಾಹಿತಿ ನೀಡಬೇಕು, ಮಾಹಿತಿ ನೀಡದೆ ನಿರ್ಲಕ್ಷ್ಯ ತೋರಿದ್ದಲ್ಲಿ ಶಿಸ್ತು ಕ್ರಮ ಜರುಗಿಸಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.

ವರದಿ: ಸೋಮಶೇಖರ ಲಮಾಣಿ

ಹೆಚ್ಚಿನ ಸುದ್ದಿ