ಬೆಂಗಳೂರು: ಪ್ರಧಾನಿಯವರ ವಿರುದ್ಧ ಆಕ್ಷೇಪಾರ್ಹ ಘೋಷಣೆ, ಹೇಳಿಕೆ ನೀಡುವ ಮೂಲಕ ಜನರ ಮತ್ತು ಪಕ್ಷದ ಕಾರ್ಯಕರ್ತರ ಭಾವನೆಗೆ ಧಕ್ಕೆ ತರುತ್ತಿರುವ ಮತ್ತು ನೋವುಂಟು ಮಾಡುತ್ತಿರುವ ಅಭಿಜಿತ್ ದೀಪ್ಕೆ ಮತ್ತು ಧ್ರುವ್ ರಾಠಿ ವಿರುದ್ಧ ಎಫ್.ಐ.ಆರ್ ದಾಖಲಿಸಬೇಕೆಂದು ಬಿಜೆಪಿ ಯುವ ಮೋರ್ಚಾವು ಆಗ್ರಹಿಸಿದೆ.
ಈ ಕುರಿತು ಇಂದು ಯುವ ಮೋರ್ಚಾದ ಬೆಂಗಳೂರು ಮಹಾನಗರದ ಬೆಂಗಳೂರು ಜಿಲ್ಲಾ ಅಧ್ಯಕ್ಷರು, ಕಾರ್ಯಕರ್ತರು ಉಪ್ಪಾರಪೇಟೆ ಪೊಲೀಸ್ ಸ್ಟೇಷನ್ಗೆ ತೆರಳಿ ದೂರು ನೀಡಿದರು. ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರ ವಿರುದ್ಧ ಅಭಿμÉೀಕ್ ದೀಪ್ಕೆ ಅವರು “ವೋಟ್ ಚೋರ್” ಅಂತೆಲ್ಲ ಹೇಳುವ ಮುಖಾಂತರ ನಮ್ಮ ಭಾವನೆಗಳಿಗೆ ಧÀಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.
ಸಾಂವಿಧಾನಿಕವಾಗಿ ನಡೆದ ಚುನಾವಣೆಗಳಲ್ಲಿ ನಮ್ಮ ಪಕ್ಷ ಗೆದ್ದಿದೆ. ಬಳಿಕ ಮೋದಿಜೀ ಅವರು ಪ್ರಧಾನಮಂತ್ರಿಯಾಗಿದ್ದಾರೆ. ಅವರ ವಿರುದ್ಧ ಆಕ್ಷೇಪಾರ್ಹ ಪದಗಳಲ್ಲಿ ಮಾತನಾಡಿದ್ದಾರೆ ಎಂದು ಟೀಕಿಸಿದರು. ಎಫ್ಐಆರ್ ಮಾಡಲು ಸರ್ಕಲ್ ಇನ್ಸ್ಪೆಕ್ಟರ್ಗೆ ಕೇಳಿಕೊಂಡಿದ್ದೇವೆ ಎಂದು ವಿವರಿಸಿದರು.
ಕಾಕ್ರೋಚ್ ಪಕ್ಷದ ಮುಖಂಡರ ವಿರುದ್ಧ ಎಫ್ಐಆರ್ ದಾಖಲಿಸಿ; ಅವರ ವಿರುದ್ಧ ತನಿಖೆ ಮಾಡಲು ಆಗ್ರಹಿಸಿದರು. ನಮ್ಮದು ಅತಿದೊಡ್ಡ ರಾಜಕೀಯ ಪಕ್ಷ. ಕಾಕ್ರೋಚ್ ಪಕ್ಷದ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಯುವಜನತೆ ತೀವ್ರ ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಸಿದರು.
ದೇಶದಲ್ಲಿ ಹಲವು ಬಾರಿ ಎಸ್ಐಆರ್ ಮಾಡಲಾಗಿದೆ. ಮೊದಲನೇ ಸಲ ಆದಾಗ ಕಾಂಗ್ರೆಸ್ ಸರ್ಕಾರ ಇತ್ತು ಎಂದು ಗಮನ ಸೆಳೆದರು. ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ದೀಪಕ್ ಕುಮಾರ್, ಕೇಂದ್ರ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಜಗದೀಶ್ ಆರ್.ಚಂದ್ರ ಅವರು ಮಾತನಾಡಿ ಕೂಡಲೇ ಎಫ್ಐಆರ್ ದಾಖಲಿಸಲು ಒತ್ತಾಯಿಸಿದರು.
ಬಿಜೆಪಿ ಯುವ ಮೋರ್ಚಾ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಯತಿನ್ ವೆಂಕಟೇಶ್, ಯುವ ಮೋರ್ಚಾ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಜಗದೀಶ್ ಆರ್. ಚಂದ್ರ, ಬಿಜೆಪಿ ಯುವ ಮೋರ್ಚಾ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಪ್ರಮೋದ್ ಶ್ರೀನಿವಾಸ್, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ದೀಪಕ್ ಕುಮಾರ್, ಕಾರ್ಯಕರ್ತರ ನಿಯೋಗವು ಉಪ್ಪಾರಪೇಟೆ ಪೆÇಲೀಸ್ ಠಾಣೆಗೆ ಭೇಟಿ ನೀಡಿ ದೂರು ಸಲ್ಲಿಸಿತು.
