ನವದೆಹಲಿ: ದೇಶದ ಪ್ರಮುಖ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ (86) ಅವರು ವೈದ್ಯಕೀಯ ತಪಾಸಣೆಗೆ ಸೋಮವಾರ ಒಳಗಾಗಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ರತನ್ ಟಾಟಾ, ‘ನಾನು ಮುಂಬೈನ ಆಸ್ಪತ್ರೆಯೊಂದರಲ್ಲಿ ದಾಖಲಾಗಿರುವುದು ಸುಳ್ಳು.
ವಯೋ ಸಂಬಂಧ ವೈದ್ಯಕೀಯ ತಪಾಸಣೆಗೆ ಒಳಗಾಗಿರುವೆ. ನಾನು ಆರೋಗ್ಯವಾಗಿದ್ದೇನೆ. ಸಾರ್ವಜನಿಕರು ಮತ್ತು ಮಾಧ್ಯಮಗಳು ತಪ್ಪು ಮಾಹಿತಿ ಹರಡಬೇಡಿ’ ಎಂದು ಹೇಳಿದ್ದಾರೆ.
ರಕ್ತದೊತ್ತಡ ಕಡಿಮೆಯಾದ ಕಾರಣ ರತನ್ ಟಾಟಾ ಅವರನ್ನು ಸೋಮವಾರ ಮುಂಜಾನೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಮಾಧ್ಯಮಗಳು ವರದಿ ಮಾಡಿದ್ದವು.