Saturday, March 28, 2026
Homeಧಾರ್ಮಿಕಕಾಗಿನೆಲೆ ತಿಂಥಣಿ ಕನಕ ಗುರುಪೀಠದ ಸ್ವಾಮೀಜಿ ಇನ್ನಿಲ್ಲ...

ಕಾಗಿನೆಲೆ ತಿಂಥಣಿ ಕನಕ ಗುರುಪೀಠದ ಸ್ವಾಮೀಜಿ ಇನ್ನಿಲ್ಲ…

ರಾಯಚೂರು: ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಡ್ಜ್ ಸಮೀಪ ಇರುವ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಸಿದ್ದರಾಮನಂದ ಸ್ವಾಮೀಜಿ (49) ಅವರು ಹೃದಯಾಘಾತದಿಂದ ಮಂಗಳವಾರ ಮುಂಜಾನೆ ದೈವಾಧೀನರಾಗಿದ್ದಾರೆ.

ಮಂಗಳವಾರ ಮುಂಜಾನೆ ಸುಮಾರು 3.40ರ ವೇಳೆಗೆ ಸ್ವಾಮೀಜಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಲಿಂಗಸೂಗೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿ ಅವರು ವಿಧಿವಶರಾದರು ಎಂದು ತಿಳಿದುಬಂದಿದೆ.

ಹೆಚ್ಚಿನ ಸುದ್ದಿ