ಚನ್ನಮ್ಮನ ಕಿತ್ತೂರು: ಚನ್ನಮ್ಮನ ಕಿತ್ತೂರಿನ ಗುರುವಾರ ಪೇಟೆಯ ಬಸ್ ನಿಲ್ದಾಣಕ್ಕೆ ಹಾಗೂ ಕಾಲೇಜಿಗೆ ಹೋಗುವ ರಸ್ತೆ ಪಕ್ಕದ ಮನೆಗೆ ಸಂಪರ್ಕ ಕಲ್ಪಿಸುವ ಜಲ ಮಿಷನ್ ಯೋಜನೆ ಅಡಿಯಲ್ಲಿ ಅಳವಡಿಸಲಾಗಿದ ಪೈಪುಗಳು ನಾಲ್ಕೈದು ಇಂಚು ಮೇಲಕ್ಕೆ ಹಾಕಿ ಹೋಗಿದ್ದಾರೆ, ಪೂರ್ಣ ಪ್ರಮಾಣದಲ್ಲಿ ಮನೆಗೆ ಸಂಪರ್ಕ ಕಲ್ಪಿಸುವುದನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ, ಇದರಿಂದ ಮನೆಗೆ ಸಂಪರ್ಕ ಕಲ್ಪಿಸುವ ಪೈಪುಗಳು 2 ರಿಂದ 4 ಇಂಚುಗಳಷ್ಟು ಮೇಲಕ್ಕೆ ಇವೆ ಇದರಿಂದ ಪಾದಾಚಾರಿಗಳು ನಡೆದುಕೊಂಡು ಹೋಗುತ್ತಿರುವಾಗ ಆ ಪೈಪು ಎಡವಿ ಬಿದ್ದು ಗಂಭೀರವಾಗಿ ಗಾಯಗೊಳ್ಳುತ್ತಿದ್ದಾರೆ ಹಾಗೆ ಮಕ್ಕಳು ಕೂಡ ಎಡವಿ ಬಿಳುವುದು ಸಾಮಾನ್ಯವಾಗಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಆದಷ್ಟು ಬೇಗ ಪೂರ್ಣ ಪೂರ್ಣಗೊಳಿಸಬೇಕೆಂದು ವಿನಂತಿಯನ್ನು ಮಾಡಿಕೊಳ್ಳುತ್ತಿದ್ದಾರೆ ಅಲ್ಲಿನ ಸ್ಥಳೀಯರು.
ಈ ಯೋಜನೆಗೆ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಪೂರ್ಣ ಗೊಳಿಸಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ
ಪಕ್ಕದ ಓಣಿಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಲ ಮಿಷನ್ ಯೋಜನೆ ಪೂರ್ಣಗೊಳಿಸಿದ್ದು ರಸ್ತೆ ಬದಿ ಇರುವ ಮನೆಗಳಿಗೆ ಪೂರ್ಣ ಪ್ರಮಾಣದಲ್ಲಿ ಸಂಪರ್ಕ ಕಲ್ಪಿಸಿಲ್ಲ ಇದರಿಂದ ದಿನನಿತ್ಯ ಸಂಚಾರ ಮಾಡುವ ಪಾದಾಚಾರಿಗಳಿಗೆ ತೊಂದರೆಯಾಗುತ್ತಿದೆ ಅಲ್ಲಿನ ಮನೆಯವರು ನಳದ ಸಂಪರ್ಕವನ್ನು ಪೂರ್ಣಗೊಳಿಸಬೇಕೆಂದು ಆಗ್ರಹಿಸುತ್ತಿದ್ದಾರೆ.
ಈ ಜಲ ಮಿಷನ್ ಯೋಜನೆಗೆ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಪೂರ್ಣ ಪ್ರಮಾಣದಲ್ಲಿ ಯೋಜನೆಯನ್ನು ಪೂರ್ಣಗೊಳಿಸಬೇಕೆಂದು ಕಿತ್ತೂರಿನ ಜನತೆ ಆಗ್ರಹಿಸುತ್ತಿದ್ದಾರೆ

ಸಂಪಾದಕರು: ರಾಮಚಂದ್ರಪ್ಪ ಪೂಜೇರ (ಚನ್ನಮ್ಮನ ಕಿತ್ತೂರು)
