


ಚನ್ನಮ್ಮನ ಕಿತ್ತೂರು: 02 June 2026 ರಂದು ವಿಶ್ವ ಹಿಂದೂ ಪರಿಷದ್–ಬಜರಂಗದಳ, ಚನ್ನಮ್ಮನ ಕಿತ್ತೂರು ಘಟಕದ ವತಿಯಿಂದ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯಿದೆ ಜಾರಿಯಲ್ಲಿದ್ದರೂ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಗೋ ಸಾಗಾಟ ಹಾಗೂ ಗೋಹತ್ಯೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ಹಾಗೂ ಪಟ್ಟಣದಲ್ಲಿ ಇರುವ ಅಂಗಡಿ ಮುಂಗಟ್ಟುಗಳನ್ನು ಸ್ವಂ ಪ್ರೇರಿತರಾಗಿ ಸಾರ್ವಜನಿಕರು ಬಂದ್ ಮಾಡಿ ಗೋ ಹತ್ಯೆ ಖಂಡಿಸಿದರು.
ಗೋ ರಕ್ಷಕರು ಆರಕ್ಷಕ /ಪೊಲೀಸ್ ಸಿಬ್ಬಂದಿಯೊಂದಿಗೆ ಸೇರಿ ಗೋಹತ್ಯೆ ತಡೆಯುವ ಕಾರ್ಯದಲ್ಲಿ ತೊಡಗಿರುವ ಗೋ ರಕ್ಷಕರ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು ಹಾಗೂ ಸುಳ್ಳು ಕೇಸಗಳನ್ನು ಹಿಂಪಡಿಯುವಂತೆ ಆಗ್ರಹಿಸಲಾಯಿತು.
ಈ ಪ್ರತಿಭಟನೆಯ ಬಳಿಕ ತಹಶೀಲ್ದಾರರ ಮೂಲಕ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು,
ಗೋ ಸಂರಕ್ಷಣಾ ಕಾಯಿದೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ, ಅಕ್ರಮ ಗೋ ಸಾಗಾಟ ಮತ್ತು ಗೋಹತ್ಯೆ ಸೇರಿದಂತೆ ನಡೆಯುತ್ತಿರುವ ಕಾನೂನುಬಾಹಿರ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ತಡೆಗಟ್ಟುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಸುತ್ತಲಿನ ಸಮಸ್ತ ಸ್ವಾಮೀಜಿಗಳು, ವಿಶ್ವ ಹಿಂದೂ ಪರಿಷದ್, ಬಜರಂಗದಳದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸಂಪಾದಕರು: ರಾಮಚಂದ್ರಪ್ಪ ಪೂಜೇರ (ಚನ್ನಮ್ಮನ ಕಿತ್ತೂರು)
