Monday, July 6, 2026
Homeಅಂತರರಾಜ್ಯಜೂನ್ 25ರ ತುಂಗಭದ್ರಾ ಕ್ರಸ್ಟ್ ಗೇಟ್ ಉದ್ಘಾಟನೆ: ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಆಹ್ವಾನ

ಜೂನ್ 25ರ ತುಂಗಭದ್ರಾ ಕ್ರಸ್ಟ್ ಗೇಟ್ ಉದ್ಘಾಟನೆ: ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಆಹ್ವಾನ

ಹೈದರಾಬಾದ್/ಮುನಿರಾಬಾದ್:ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ಗಳ ಉದ್ಘಾಟನಾ ಸಮಾರಂಭಕ್ಕೆ ಅತಿಥಿಯಾಗಿ ಆಗಮಿಸುವಂತೆ ಕೋರಿ, ಕರ್ನಾಟಕದ ನಿಯೋಗವು ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ಎನ್. ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಅಧಿಕೃತ ಆಹ್ವಾನ ನೀಡಿದೆ.

ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ಸೂಚನೆಯ ಮೇರೆಗೆ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ಮಾಜಿ ಸಚಿವರಾದ ಎನ್.ಎಸ್. ಬೋಸುರಾಜ್ ಹಾಗೂ ಬಸವರಾಜ ರಾಯರೆಡ್ಡಿ ಅವರು ಹೈದರಾಬಾದ್‌ನಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾದರು.

ಈ ವೇಳೆ ಜೂನ್ 25ರಂದು ಮುನಿರಾಬಾದ್‌ನಲ್ಲಿ ನಡೆಯಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ಗಳ ಉದ್ಘಾಟನಾ ಕಾರ್ಯಕ್ರಮದ ಮಹತ್ವವನ್ನು ವಿವರಿಸಿ, ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನಿಸಲಾಯಿತು.

ಆಹ್ವಾನವನ್ನು ಸ್ವೀಕರಿಸಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, ಕಾರ್ಯಕ್ರಮಕ್ಕೆ ಖುದ್ದಾಗಿ ಆಗಮಿಸುವುದಾಗಿ ಸಮ್ಮತಿ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಆಂಧ್ರಪ್ರದೇಶದ ಸಚಿವರಾದ ರಾಮ್ ಮೋಹನ ನಾಯ್ಡು ಮತ್ತು ಪಿ. ಕೇಶವ ಉಪಸ್ಥಿತರಿದ್ದರು. ತುಂಗಭದ್ರಾ ಜಲಾಶಯದ ನವೀಕೃತ ಕ್ರಸ್ಟ್ ಗೇಟ್‌ಗಳ ಉದ್ಘಾಟನೆಯು ಕರ್ನಾಟಕ ಮತ್ತು ಆಂಧ್ರಪ್ರದೇಶದ ರೈತರ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದ್ದು, ನೆರೆಯ ರಾಜ್ಯದ ಮುಖ್ಯಮಂತ್ರಿಗಳ ಉಪಸ್ಥಿತಿಯು ಉಭಯ ರಾಜ್ಯಗಳ ನಡುವಿನ ಜಲ ಸಂಬಂಧಿತ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲಿದೆ ಎಂದು ನಿರೀಕ್ಷಿಸಲಾಗಿದೆ.

ಹೆಚ್ಚಿನ ಸುದ್ದಿ