ಚಿಕ್ಕಬಳ್ಳಾಪುರ: ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕುವ ಉದ್ದೇಶದಿಂದ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು.
ಕಾರುಗಳು ಹಾಗೂ ಸರಕು ಸಾಗಾಣಿಕೆ ವಾಹನಗಳಿಗೆ ನಿಯಮ ಬಾಹಿರವಾಗಿ ಅಳವಡಿಸಲಾಗಿದ್ದ ಟಿಂಟ್ ಪೇಪರ್ಗಳನ್ನು ಸ್ಥಳದಲ್ಲೇ ತೆಗೆಯಿಸಿ, ವಾಹನ ಸವಾರರಿಗೆ ದಂಡ ವಿಧಿಸಿದರು.
ಈ ವೇಳೆ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಮತ್ತು ಕಾನೂನು ಪಾಲನೆಯ ಮಹತ್ವದ ಕುರಿತು ಅರಿವು ಮೂಡಿಸಲಾಯಿತು. ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದರು.
ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕವೇ ಅಪಘಾತಗಳನ್ನು ತಪ್ಪಿಸಬಹುದು ಎಂಬ ಸಂದೇಶವನ್ನು ಈ ಕಾರ್ಯಾಚರಣೆ ಮೂಲಕ ಪೊಲೀಸರು ಹಂಚಿಕೊಂಡಿದ್ದಾರೆ.
