ದೇವರೆ ಹಿಪ್ಪರಗಿ: ದೇವರೆ ಹಿಪ್ಪರಗಿ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಾಮನಕೇರಿ ಬೂದಿಹಾಳ ಗ್ರಾಮದಲ್ಲಿ ಇಂದು ಶ್ರೀ ಹುಸನಮ್ಮ ದೇವಿ ಜಾತ್ರಾ ಮಹೋತ್ಸವವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಮತಕ್ಷೇತ್ರದ ಬಿಜೆಪಿ ಮುಖಂಡರಾದ ಸನ್ಮಾನ್ಯ ಶ್ರೀ ಬಸನಗೌಡ ಎಸ್. ಪಾಟೀಲ (ಯಡಿಯಾಪೂರ) ಅವರು ಪಾಲ್ಗೊಂಡು ದೇವಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ದೇವಿಯ ಕೃತು ಗದ್ದುಗಿಗೆ ವಿಶೇಷ ಪೂಜೆ ಸಲ್ಲಿಸಿ ನಮಸ್ಕರಿಸಿದ ಅವರು, “ಜನಸೇವೆಯನ್ನು ನಿರಂತರವಾಗಿ ಮಾಡಲು ಶಕ್ತಿ ನೀಡಲಿ” ಎಂದು ದೇವಿಯಲ್ಲಿ ಪ್ರಾರ್ಥಿಸಿ ಆಶೀರ್ವಾದ ಪಡೆದರು. ಬಳಿಕ ಗ್ರಾಮದ ಪರವಾಗಿ ಶ್ರೀ ಬಸನಗೌಡ ಪಾಟೀಲ ಅವರಿಗೆ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖಂಡರಾದ ಸಣ್ಣ ಶಿವನಗೌಡ ಬಾಗೇವಾಡಿ, ಬಾಗಪ್ಪ ಕಂಟೆಪ್ಪಗೋಳ ಸೇರಿದಂತೆ ಗ್ರಾಮದ ಹಿರಿಯರು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಉಪಸ್ಥಿತರಿದ್ದರು. ಭಕ್ತಾದಿಗಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಜಾತ್ರಾ ಮಹೋತ್ಸವವು ಭಕ್ತಿಭಾವದಿಂದ ನೆರವೇರಿತು
