Thursday, April 16, 2026
HomeUncategorizedಧರ್ಮಪುರದಲ್ಲಿ ಡಾ. ಬಿ.ಆರ್. ಅಂಬೇಡ್ಕ‌ರ್ ಅವರ 135ನೇ ಜಯಂತಿ ಅದ್ದೂರಿಯಾಗಿ ಆಚರಣೆ

ಧರ್ಮಪುರದಲ್ಲಿ ಡಾ. ಬಿ.ಆರ್. ಅಂಬೇಡ್ಕ‌ರ್ ಅವರ 135ನೇ ಜಯಂತಿ ಅದ್ದೂರಿಯಾಗಿ ಆಚರಣೆ

ಧರ್ಮಪುರ, ಏಪ್ರಿಲ್ 14: ಧರ್ಮಪುರ ಗ್ರಾಮದಲ್ಲಿ ಡಾ. ಬಿ.ಆ‌ರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವವನ್ನು ಅತ್ಯಂತ ಶಿಸ್ತಿನೊಂದಿಗೆ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಗಣ್ಯರು, ಊರಿನ ಹಿರಿಯರು, ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಗ್ರಾಮದ ಎಲ್ಲಾ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

ಕಾರ್ಯಕ್ರಮದ ಅಂಗವಾಗಿ ಡಾ. ಬಾಬಾಸಾಹೇಬ್ ಅಂಬೇಡ್ಕ‌ರ್ ಅವರ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಿ, ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ನಂತರ ಭವ್ಯ ಮೆರವಣಿಗೆಗೆ ಚಾಲನೆ ನೀಡಲಾಗಿದ್ದು, ಮೆರವಣಿಗೆಯು ಗ್ರಾಮದೆಲ್ಲೆಡೆ ಸಂಚರಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಹಾಗೂ ಉತ್ಸಾಹವನ್ನು ಮೂಡಿಸಿತು.

ಕಾರ್ಯಕ್ರಮವು ಶಾಂತಿಯುತವಾಗಿ ಹಾಗೂ ಯಶಸ್ವಿಯಾಗಿ ನೆರವೇರಿತು.

ಹೆಚ್ಚಿನ ಸುದ್ದಿ