ಧಾರವಾಡ : ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆ ಬೆಳಗಾವಿ ಇದರ ಅಡಿಯಲ್ಲಿ ಧಾರವಾಡದ ಶ್ರೀ ನಗರದಲ್ಲಿ ನಡೆಯುತ್ತಿರುವ ಪ್ರೊ ಕಮಲಾ ಬಾಳೆಕುಂದ್ರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 24/01/2026 ರಂದು ಶನಿವಾರ ಸಾಯಂಕಾಲ 5 ಘಂಟೆಗೆ ಶಾಲಾ ವಾರ್ಷಿಕೋತ್ಸವ ಜರುಗಿತು.
ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಕಮಲಾ ಬಾಳೆಕುಂದ್ರಿ ಆಂಗ್ಲ ಮಾಧ್ಯಮ ಶಾಲೆ ಬೆಳಗಾವಿ ನಾಗನೂರು ರುದ್ರಾಕ್ಷಿ ಮಠದ ಮಾರ್ಗದರ್ಶನದಲ್ಲಿ ಧಾರವಾಡದ ತುಂಬೆಲ್ಲಾ ಶಿಕ್ಷಣ ಪ್ರಸಾರ ನಡೆಸುವಂತಾಗಲೆಂದು ಕಾರ್ಯಕ್ರಮದ ಸಾನಿಧ್ಯ ವಹಿಸಿದ ಪರಮ ಪೂಜ್ಯ ಶ್ರೀ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಆಶೀರ್ವದಿಸಿದರು.
ಉದ್ಘಾಟಕರಾಗಿ ಆಗಮಿಸಿದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹಾಪೌರರಾದ ಶ್ರೀಮತಿ ಜ್ಯೋತಿ ಪಾಟೀಲ ಮಾತನಾಡಿ ಪಾಲಕರು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಬೇಕೆಂದು ಆಶಿಸಿದರು.
ಮುಖ್ಯ ಅಥಿತಿಗಳಾಗಿ ಆಗಮಿಸಿದ ಖ್ಯಾತ ಮನೋವೈದ್ಯರಾದ ಶ್ರೀ ಡಾ. ಆನಂದ ಪಾಂಡುರಂಗಿ ಅವರು ಮಕ್ಕಳ ಸಾಮರ್ಥ್ಯಕ್ಕೆ ಅನುಗುಣವಾಗಿ ಫಲಿತಾಂಶವನ್ನು ನಿರೀಕ್ಷಿಸಬೇಕು ಬೇರೆಯವರೊಂದಿಗೆ ಹೋಲಿಕೆ ಮಾಡಬಾರದು ಎಂದು ಪಾಲಕರಿಗೆ ಕಿವಿ ಮಾತು ಹೇಳಿದರು.
ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀ ಕೆ. ಆರ್. ಹಿರೇಮಠ, ಸಿದ್ದರಾಮೇಶ್ವರ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಚಾರ್ಯರಾದ ಶ್ರೀಮತಿ ಜಿ.ಕೆ.ಹಿರೇಮಠ ಹಾಗೂ ಕಮಲಾ ಬಾಳೆಕುಂದ್ರಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಶ್ರೀ ಎಂ.ಜಿ. ಹಿರೇಮಠ ಶಾಲೆಯ ಎಲ್ಲ ಸಿಬ್ಬಂದಿ ಪಾಲಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
