ಬೆಂಗಳೂರು, ಫೆಬ್ರವರಿ 19, : ಬೆಂಗಳೂರು ಭೇಟಿಗಾಗಿ ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ (H.E. Mr. Dick Schoof) ಅವರು ತಮ್ಮ ನಿಯೋಗದೊಂದಿಗೆ ಇಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದರು
ಗೌರವಾನ್ವಿತ ನೆದರ್ ಲ್ಯಾಂಡ್ಸ್ ಪ್ರಧಾನಿಗಳನ್ನು ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ ಗುಪ್ತ ಅವರು ಹೂ ಗುಚ್ಛ ನೀಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಕೆ. ಜಿ ಜಗದೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಗೌರವಾನ್ವಿತ ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿಗಳು ನಾಳೆ ಫೆಬ್ರವರಿ 20 ರಂದು ಆರ್.ಟಿ. ನಗರದಲ್ಲಿರುವ ಫಿಲಿಪ್ಸ್ ಇನ್ನೋವೇಶನ್ ಕ್ಯಾಂಪಸ್ (Philips Innovation Campus), ಇನ್ಫೆಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ಸಂಚಾರ ಪೊಲೀಸ್ ನಿಯಂತ್ರಣ ಕೇಂದ್ರಕ್ಕೆ (BTP Control Centre), ಭಾರತೀಯ ವಿಜ್ಞಾನ ಸಂಸ್ಥೆ (IISc) ಗೆ ಭೇಟಿ ನೀಡಲಿದ್ದಾರೆ. ನಂತರ ಬೆಂಗಳೂರಿನ ಉದ್ಯಮಿಗಳೊಂದಿಗೆ ಹೋಟೆಲ್ ಫೋರ್ ಸೀಸನ್ಸ್ನಲ್ಲಿ ಮಧ್ಯಾಹ್ನದ ಭೋಜನ ಸಭೆ ನಡೆಸಿ, ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಯಾಣಿಸಲಿದ್ದಾರೆ
