ಕೆ.ಆರ್.ಪೇಟೆ:ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ವೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಇದರಿಂದ ಬದುಕು ಸುಂದರವಾಗುತ್ತದೆ. ವೌಲ್ಯಗಳನ್ನು ಕಲಿಯಲು ಮಹಾತ್ಮರ ಜೀವನ ಚರಿತ್ರೆಗಳನ್ನು ಓದುವದನ್ನು ರೂಢಿಸಿಕೊಳ್ಳಬೇಕೆಂದು ಎಂದು ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ತಿಳಿಸಿದರು.
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಜೈನಹಳ್ಳಿ ಡಾ: ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶಾರದಾ ಪೂಜೆ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಶ್ರೀ ಶಾರದದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಜೀವನದಲ್ಲಿ ಗುರಿ, ಚಲ,ಗುರುವಿನ ಆಶೀರ್ವಾದ ಇದ್ದರೆ ಮಾತ್ರವೇ ವಿದ್ಯೆ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಸಾಧ್ಯ ನಾವು ಇಂದು ಏನಾದರೂ ಗಳಿಸಿದ್ದರೆ ಅದೆಲ್ಲವೂ ಉತ್ತಮ ಶಿಕ್ಷಣ ಹಾಗಾಗಿ ಈ ಸಮಾಜದಿಂದ ಪಡೆದ ಒಂದಷ್ಟನ್ನಾದರೂ ನಾವು ಮತ್ತೆ ಸಮಾಜಕ್ಕೆ ವಾಪಸ್ಸು ಮಾಡಬೇಕಾಗುತ್ತದೆ. ಆ ಮೂಲಕ ಅಕ್ಷರ ಕಲಿಸಿದ ಗುರುಗಳು, ಜನ್ಮ ಕೊಟ್ಟ ಹೆತ್ತವರು, ಆಡಿ ಬೆಳೆದ ಭೂಮಿಯ ಋಣವನ್ನು ತೀರಿಸಲು ಸಾಧ್ಯವಾಗುತ್ತದೆ ಎಂದ ಅವರು ಆಧುನಿಕ ಪ್ರಪಂಚದಲ್ಲಿ ವಿಜ್ಞಾನ ತಂತ್ರಜ್ಞಾನ ಮುಂದುವರೆದಂತೆಲ್ಲಾ ವಿಶ್ವವೇ ಒಂದು ಗ್ರಾಮವಂತಾಗಿದೆ. ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಹುಟ್ಟಿದ ಊರು ಬಿಟ್ಟು ಬೇರೆಲ್ಲೋ ನೆಲೆಸಿದವರು ತಮ್ಮ ದಿನನಿತ್ಯದ ಒತ್ತಡ ಜೀವನದಲ್ಲಿ ಹುಟ್ಟಿದ ಊರು, ಹೆತ್ತವರು, ಅಕ್ಷರ ಕಲಿಸಿದ ಗುರುಗಳನ್ನು ನೆನೆಸಿಕೊಳ್ಳಲಾಗದ ಸ್ಥಿತಿಗೆ ತಲುಪಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಿರಿಯ ವಿದ್ಯಾರ್ಥಿಗಳೆಲ್ಲರನ್ನೂ ಒಟ್ಟುಗೂಡಿಸುವ, ತಮ್ಮ ಹಳೆಯ ದಿನಗಳನ್ನು ಮೆಲುಕು ಹಾಕುವಂತಹ ಸುಂದರ ಕ್ಷಣಗಳಿಗೆ ಸಾಕ್ಷಿಯಾದ ಇಂತಹ ಕಾರ್ಯಕ್ರಮ ಇದೀಗ ಅಗತ್ಯವಿದೆ. ಪಾಠ ಪ್ರವಚನಗಳಷ್ಟೇ ನಡೆಯುವುದಲ್ಲ. ಕ್ರಿಯಾತ್ಮ ಚಟುವಟಿಕೆಗಳು ನಡೆದಾಗಲೇ ಶಾಲೆಯ ಶೈಕ್ಷಣಿಕ ಅಭಿವೃದ್ಧಿ ಸಾಧ್ಯ ಎಂದು ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ತಿಳಿಸಿದರು.
ಬಳಿಕ ಶಾಲಾ ವಿದ್ಯಾರ್ಥಿಗಳಿಂದ ನಡೆದ ವಿವಿಧ ಸಂಸ್ಕೃತಿಕ ನೃತ್ಯ ಪ್ರದರ್ಶನ ಪಾಲಕರ, ವಿದ್ಯಾರ್ಥಿಗಳ ಮನದಲ್ಲಿ ರೋಮಾಂಚನವನ್ನುಂಟು ಮಾಡಿತು. ಹತ್ತನೇ ತರಗತಿ ವಿದ್ಯಾರ್ಥಿಗಳು ತಮ್ಮ ಅನುಭವವನ್ನು ಹಂಚಿಕೊಂಡರು. ಪ್ರಾಂಶುಪಾಲ ರಾಜಣ್ಣ ಮಕ್ಕಳಿಗೆ ಶುಭಹಾರೈಸಿ ಮಕ್ಕಳಿಗೆ ನೆನಪಿನ ಕಾಣಿಕೆಯನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ರಾಜಣ್ಣ,ಶಿಕ್ಷಕರಾದ ರವಿಶಿವಕುಮಾರ್,ಮಮತಾ,ಪವಿತ್ರ, ರೋಹಿತ್,ಗೋಪಿಕೃಷ್ಣ,ಸುಮಾ,ಪ್ರೇಮ,ಪಲ್ಲವಿ, ಗೋವಿಂದ, ಅಂಬಿಕಾ, ನಿಲಯಪಾಲಕ ಉಮೇಶ್ ಪೋಷಕರು ಸೇರಿದಂತೆ ಉಪಸ್ಥಿತರಿದ್ದರು.
ವರದಿ :: ಮನು ಮಾಕವಳ್ಳಿ ಕೆ.ಆರ್.ಪೇಟೆ
