Monday, December 23, 2024
Homeಬೆಂಗಳೂರುರಾಜ್ಯ ಸರ್ಕಾರದಿಂದ 'ಭೋವಿ' ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದಿಂದ ‘ಭೋವಿ’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : 2024-25 ನೇ ಸಾಲಿಗೆ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಅನುಷ್ಠಾನ ಮಾಡುತ್ತಿರುವ ಸ್ವಯಂ ಉದ್ಯೋಗ ಯೋಜನೆಯಡಿ ನೇರಸಾಲ, ಉದ್ಯಮಶೀಲತಾ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೇವಾಸಿಂಧು ಪೋರ್ಟಲ್ https://sevasindhu.karantaka.gov.in ಮೂಲಕ ಕರ್ನಾಟಕ ಒನ್, ಗ್ರಾಮ್ ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 10, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447151 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಸುದ್ದಿ