Tuesday, February 10, 2026
HomeUncategorizedರಾಯಚೂರಿನಲ್ಲಿ ಮತ್ತೊಬ್ಬ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿಯನ್ನು ಸಿಪಿಐ ಹೊಸಕೇರಪ್ಪ ಬಂಧಿಸಿದ್ದಾರೆ.

ರಾಯಚೂರಿನಲ್ಲಿ ಮತ್ತೊಬ್ಬ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿಯನ್ನು ಸಿಪಿಐ ಹೊಸಕೇರಪ್ಪ ಬಂಧಿಸಿದ್ದಾರೆ.

ಹಟ್ಟಿ ಚಿನ್ನದಗಣಿ : ಚಾಕಲೇಟ್ ಕೊಡುವೆ ಎಂದು ಪುಸಲಾಯಿಸಿ ಬುದ್ದಿಮಾಂದ್ಯ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದಗಣಿ ಪಟ್ಟಣದಲ್ಲಿ ನಡೆದಿದೆ.

ಅತ್ಯಾಚಾರಿ ಆರೋಪಿ ಚಂದ್ರಶೇಖರ್ ಎಂಬಾತನನ್ನು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಯು ಪಟ್ಟಣದ ಬಸವ ಸಮಿತಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದಳು. ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಚಾಕೊಲೇಟ್ ತೆಗೆದುಕೊಂಡು ಬರಲು ಬಾಲಕಿ ಅಂಗಡಿಗೆ ಹೋದ ಆರೋಪಿಯು ನಾನು ಚಾಕೊಲೇಟ್ ಕೊಡುವೆನೆಂದು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ.

ಆರೋಪಿಯು ಬಾಲಕಿಯನ್ನು ಕರೆದುಕೊಂಡು ಹೋಗಿ ಮಗುವಿನ ಜತೆ ಅಶ್ಲೀಲವಾಗಿ ಮಾತನಾಡುತ್ತಿರುವುದನ್ನು ಗಮನಿಸಿ ಪಕ್ಕದ ಮನೆಯವರು ಸಂಶಯಪಟ್ಟು ಹೊರಗೆ ಹೋಗಿ ನೋಡಿದ್ದಾರೆ. ಅತ್ಯಾಚಾರಕ್ಕೆ ಯತ್ನಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಗಾಡಿದ ಬಳಿಕ ಜನ ಸೇರಿದ್ದು, ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಗುವನ್ನು ರಕ್ಷಿಸಿ, ಆರೋಪಿಯನ್ನು ಬಂಧಿಸಿದ್ದಾರೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದ ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ನಡೆದ ಘಟನೆ ಮಾಸುವ ಮುನ್ನವೇ ಇನ್ನೊಂದು ಪೈಶಾಚಿಕ ಘಟನೆ ನಡೆದಿದೆ. ಆದರೂ ಪೊಲೀಸರು ಕಠಿಣ ಕ್ರಮ ಜರುಗಿಸುತ್ತಿಲ್ಲ. ಇಂತಹ ಆರೋಪಿಗಳಿಗೆ ಗಲ್ಲುಶಿಕ್ಷೆ ನೀಡಬೇಕು. ಇಲ್ಲದಿದ್ದರೆ ಇನ್ನೆಷ್ಟು ಮಕ್ಕಳ ಜೀವ ಹೋಗುವುದೋ ಕಳೆ ಯಬೇಕು ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ.

ಜಿಲ್ಲಾ ವರದಿಗಾರರು : ಶಿವು ರಾಠೋಡ ರಾಯಚೂರು

ಹೆಚ್ಚಿನ ಸುದ್ದಿ