Saturday, March 14, 2026
Homeಜಿಲ್ಲಾ ಸುದ್ದಿಗಳುವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಯಾದಗಿರಿ: ಜಿಲ್ಲೆಯ ಗುರುಮಠಕಲ್ ಪಟ್ಟಣದ ಡಿ. ದೇವರಾಜ ಅರಸು ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿನಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಶು ಕ್ರವಾರ ಬೆಳಕಿಗೆ ಬಂದಿದೆ.

ಮೃತ ವಿದ್ಯಾರ್ಥಿನಿಯನ್ನು ಗುರುಮಠಕಲ್ ತಾಲ್ಲೂಕಿನ ನಂದೇಪಳ್ಳಿ ಗ್ರಾಮದ ಸ್ವಾತಿ ಶರಣುಗೌಡ (18) ಎಂದು ಗುರುತಿಸಲಾಗಿದೆ. ಪಟ್ಟಣದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿ ನಿಲಯದಲ್ಲೇ ವಾಸಿಸುತ್ತಿದ್ದರು.

ಶುಕ್ರವಾರ ಬೆಳಿಗ್ಗೆ ಉಪಹಾರಕ್ಕೆ ಕರೆದರೂ ಸ್ವಾತಿ ಹೊರಗೆ ಬರಲಿಲ್ಲ. ನಾಳೆಯ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡ ಬಳಿಕ ಉಪಹಾರ ಅಥವಾ ಊಟ ಮಾಡುವುದಾಗಿ ಹೇಳಿ ಕೋಣೆಯೊಳಗೆ ಉಳಿದುಕೊಂಡು ಬಾಗಿಲು ಹಾಕಿಕೊಂಡಿದ್ದಳು ಎಂದು ತಿಳಿದು ಬಂದಿದೆ.

ಕೆಲ ಸಮಯದ ನಂತರ ಸ್ವಾತಿಯ ಪೋಷಕರು ಆಕೆಯ ಸಹಪಾಠಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ ವಿಚಾರಿಸಿದಾಗ, ಅವರು ಕೋಣೆಗೆ ತೆರಳಿ ಬಾಗಿಲು ತಟ್ಟಿದರು. ಆದರೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಮೇಲಿನ ಕಿಟಕಿ ಗಾಜು ಒಡೆದು ಮೊಬೈಲ್ ಮೂಲಕ ಒಳಗೆ ನೋಡಿದಾಗ ಕಿಟಕಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸ್ವಾತಿ ಪತ್ತೆಯಾದರು. ತಕ್ಷಣವೇ ವಸತಿ ನಿಲಯದ ವಾರ್ಡನ್ ಅಂಬಾಬಾಯಿ ತಳವಾರ ಅವರಿಗೆ ಮಾಹಿತಿ ನೀಡಲಾಯಿತು. ಘಟನಾ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಹಿಂದುಳಿದ ವರ್ಗಗಳ ಇಲಾಖೆ ಉಪನಿರ್ದೇಶಕ ಸದಾಶಿವ ನಾರಾಯಣಕರ್‌, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ತಾಲ್ಲೂಕು ಪಂಚಾಯಿತಿ ಇಒ ಅಂಬರೇಶ ಪಾಟೀಲ ಹಾಗೂ ಹಿಂದುಳಿದ ವರ್ಗಗಳ ಸಹಾಯಕ ನಿರ್ದೇಶಕ ಸಂತೋಷರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೆಚ್ಚಿನ ಸುದ್ದಿ