Monday, December 23, 2024
Homeಜಿಲ್ಲಾ ಸುದ್ದಿಗಳುಶಿಗ್ಗಾವ್ ಟಿಕೆಟ್ಮುಸ್ಲಿಂ ಅಭ್ಯರ್ಥಿ ಹಾಕಲು ಜಮೀರ್ ಅಹಮದ್ ಖಾನ್ ಬ್ಯಾಟಿಂಗ್

ಶಿಗ್ಗಾವ್ ಟಿಕೆಟ್ಮುಸ್ಲಿಂ ಅಭ್ಯರ್ಥಿ ಹಾಕಲು ಜಮೀರ್ ಅಹಮದ್ ಖಾನ್ ಬ್ಯಾಟಿಂಗ್

ಬೆಂಗಳೂರು :ಉಪ ಚುನಾವಣೆ ಹಿನ್ನೆಲೆ ಯಲ್ಲಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆ ವಾಲಾ ಅವರನ್ನು ಭೇಟಿ ಮಾಡಿದ್ದ ಸಚಿವ ಜಮೀರ್ ಅಹಮದ್ ಖಾನ್, ಶಿಗ್ಗಾವ್ ಕ್ಷೇತ್ರಕ್ಕೆ ಮುಸ್ಲಿಂ ಅಭ್ಯರ್ಥಿ ಗೆ ಟಿಕೆಟ್ ನೀಡಲು ಒತ್ತಾಯಿಸಿದರು.
ಕಳೆದ ವಿಧಾನ ಸಭೆ ಹಾಗೂ ಲೋಕಸಭೆ ಚುನಾವಣೆ ಯಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್ ಪರ ನಿಂತಿದ್ದು ಶಿಗ್ಗಾವ್ ಟಿಕೆಟ್ ಮುಸ್ಲಿಂ ಸಮುದಾಯಕ್ಕೆ ಬೇಕೇ ಬೇಕು ಎಂದು ಪಟ್ಟು ಹಿಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಈ ಬಗ್ಗೆ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಮುಸ್ಲಿಂ ಜನಪ್ರತಿನಿಧಿಗಳ ನಿಯೋಗ ಬೇಡಿಕೆ ಇಟ್ಟಿತ್ತು.

ಹೆಚ್ಚಿನ ಸುದ್ದಿ