Thursday, July 9, 2026
Homeಶಿಕ್ಷಣಸಿರಿವಾರ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಬದ್ಧ - ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್

ಸಿರಿವಾರ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಬದ್ಧ – ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್

​ಬಳ್ಳಾರಿ: ಇಂದು ಬಳ್ಳಾರಿ ತಾಲೂಕಿನ ಸಿರಿವಾರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು, ಶಾಲೆಯ ಕಟ್ಟಡ, ತರಗತಿ ಕೊಠಡಿಗಳು ಹಾಗೂ ಲಭ್ಯವಿರುವ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.

​ಶಾಲಾ ಆವರಣವನ್ನು ವೀಕ್ಷಿಸಿದ ಸಂದರ್ಭದಲ್ಲಿ, ಶಾಲೆಯ ಮೇಲ್ಛಾವಣಿಯಲ್ಲಿ ನೀರು ಸೋರಿಕೆಯಾಗುತ್ತಿರುವ ಗಂಭೀರ ಸಮಸ್ಯೆಯನ್ನು ಗಮನಿಸಿದರು. ಈ ಬಗ್ಗೆ ತಕ್ಷಣವೇ ಸ್ಪಂದಿಸಿದ ಅವರು, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ, ಕೂಡಲೇ ಅಗತ್ಯ ದುರಸ್ತಿ ಕಾರ್ಯವನ್ನು ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

​ಈ ಸಂದರ್ಭದಲ್ಲಿ ಮಾತನಾಡಿದ ಎನ್. ರವಿಕುಮಾರ್ ಅವರು, “ವಿದ್ಯಾರ್ಥಿಗಳಿಗೆ ಉತ್ತಮ ಹಾಗೂ ಸುರಕ್ಷಿತ ಶೈಕ್ಷಣಿಕ ವಾತಾವರಣ ಕಲ್ಪಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಶಾಲೆಯ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ನೀಡಲು ನಾವು ಬದ್ಧರಾಗಿದ್ದೇವೆ” ಎಂದು ಭರವಸೆ ನೀಡಿದರು.

​ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ವೈ.ಎಂ. ಸತೀಶ್, ಶಾಲೆಯ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು

ಹೆಚ್ಚಿನ ಸುದ್ದಿ