ಕಾರವಾರ, ಏ.10:- ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 50 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗಾಗಿ ಮೇ ತಿಂಗಳ ಕೊನೆಯ ವಾರದಲ್ಲಿ 31 ದಿನಗಳ ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸ್ ಉಚಿತ ತರಬೇತಿಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು:
www.rsetihaliyal.org
ಅಥವಾ https://forms.gle/m4pcmpritDevbwug9
ಮೂಲಕ ಅರ್ಜಿ ಸಲ್ಲಿಸಬಹುದು.
ತರಬೇತಿ ಅವಧಿಯಲ್ಲಿ ಊಟ ವಸತಿ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ನುರಿತ ಮಾರ್ಗದರ್ಶಕರಿಂದ ಪ್ರಾಯೋಗಿಕ ತರಬೇತಿ, ಥಿಯರಿ ಮತ್ತು ಪ್ರಾö್ಯಕ್ಟಿಕಲ್ ಅವಧಿಗಳು, ಸಾಧನಾ ಪ್ರೇರಣೆ ತರಬೇತಿ, ಉದ್ಯಮಶಿಲತೇಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟದ ತಂತ್ರಗಳು, ಯಶಸ್ವಿ ಉದ್ಯಮಗಳಿಂದ ಅನಿಭವದ ಹಂಚಿಕೆ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ, ಬ್ಯಾಂಕಿನಿAದ ಸಾಲ ಪಡೆದು ಸ್ವಉದ್ಯೋಗ ಪ್ರಾರಂಭಿಸಲು ಬೇಕಾದ ಜ್ಞಾನ, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8970145354, 9483485489, 9482188780 ನ್ನು ಸಂಪರ್ಕಿಸಬಹುದು ಎಂದು ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

