Tuesday, June 16, 2026
Homeಜಿಲ್ಲಾ ಸುದ್ದಿಗಳುಹಾಲಳ್ಳಿ ಗ್ರಾಮದಲ್ಲಿ 65 ಲಕ್ಷ ರೂ. ವೆಚ್ಚದ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಕಟ್ಟಡಕ್ಕೆ ಶಾಸಕ...

ಹಾಲಳ್ಳಿ ಗ್ರಾಮದಲ್ಲಿ 65 ಲಕ್ಷ ರೂ. ವೆಚ್ಚದ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಕಟ್ಟಡಕ್ಕೆ ಶಾಸಕ ಲಕ್ಷ್ಮಣ ಸವದಿ ಭೂಮಿ ಪೂಜೆ

ಅಥಣಿ :ಮತಕ್ಷೇತ್ರದ ಹಾಲಳ್ಳಿ ಗ್ರಾಮದಲ್ಲಿ 65 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರದ ಕಟ್ಟಡ ಕಾಮಗಾರಿಗೆ ಶಾಸಕ ಲಕ್ಷ್ಮಣ ಸವದಿ ಅವರು ಗ್ರಾಮದ ಹಿರಿಯ ಮುಖಂಡರು ಹಾಗೂ ಗ್ರಾಮಸ್ಥರೊಂದಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು, “ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಮಾಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಹಾಲಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಈ ನೂತನ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರವು ಗ್ರಾಮಸ್ಥರಿಗೆ ಉತ್ತಮ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಸಹಕಾರಿಯಾಗಲಿದೆ. ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಗ್ರಾಮೀಣ ಜನರ ಆರೋಗ್ಯ ರಕ್ಷಣೆಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಹಂತ ಹಂತವಾಗಿ ಒದಗಿಸಲಾಗುವುದು” ಎಂದು ಹೇಳಿದರು.

ಈ ನೂತನ ಕಟ್ಟಡ ನಿರ್ಮಾಣದಿಂದ ಹಾಲಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಆರೋಗ್ಯ ಸೇವೆಗಳು ಮತ್ತಷ್ಟು ಸುಲಭವಾಗಿ ಲಭ್ಯವಾಗಲಿದ್ದು, ಸಾರ್ವಜನಿಕರ ಆರೋಗ್ಯ ಸಂರಕ್ಷಣೆಗೆ ಹೆಚ್ಚಿನ ನೆರವಾಗಲಿದೆ ಎಂದು ಅವರು ತಿಳಿಸಿದರು.

ಪೂಜಾ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯ ಮುಖಂಡರು, ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಹೆಚ್ಚಿನ ಸುದ್ದಿ